ಅಹಮದಾಬಾದ್(ಗುಜರಾತ್):ಅಹಮದಾಬಾದ್‌ನ ಐಐಎಂ ರಸ್ತೆಯಲ್ಲಿ ವಲಸೆ ಕಾರ್ಮಿಕರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ.
ಪೊಲೀಸರ ಮೇಲೆ ವಲಸೆ ಕಾರ್ಮಿಕರಿಂದ ಕಲ್ಲು ತೂರಾಟ.. ಪರಿಸ್ಥಿತಿ ನಿಯಂತ್ರಣಕ್ಕೆ ಅಶ್ರುವಾಯು ಪ್ರಯೋಗ - ಪೊಲೀಸರ ಮೇಲೆ ಕಲ್ಲುತೂರಾಟ
ಅಹಮದಾಬಾದ್‌ನಲ್ಲಿ ಪೊಲೀಸರು ಮತ್ತು ವಲಸೆ ಕಾರ್ಮಿಕರ ನಡುವೆ ಘಟರ್ಷಣೆ ಸಂಭವಿಸಿದ್ದು, ಕಾರ್ಮಿಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಪೊಲೀಸರ ಮೇಲೆ ವಲಸೆ ಕಾರ್ಮಿಕರಿಂದ ಕಲ್ಲು ತೂರಾಟ
ವಲಸೆ ಕಾರ್ಮಿಕರು ತಮ್ಮ ತವರು ರಾಜ್ಯಗಳಿಗೆ ಮರಳಲು ವ್ಯವಸ್ಥೆ ಮತ್ತು ಅನುಮತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಕಾರ್ಮಿಕರ ನಡುವೆ ಘರ್ಷಣೆ ಸಂಭವಿಸಿದ್ದು, ವಲಸೆ ಕಾರ್ಮಿಕರು ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಕಲ್ಲು ತೂರಾಟ ನಡೆಸಿದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.