ಬೆತುಲ್ (ಮಧ್ಯಪ್ರದೇಶ):ಮೂವರು ಕಾಮುಕರಿಂದ ಅತ್ಯಾಚಾರಕ್ಕೊಳಗಾಗಿದ್ದ ವಿದ್ಯಾರ್ಥಿನಿವೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆತುಲ್ನಲ್ಲಿ ನಡೆದಿದೆ.
ಮೂವರು ಕಾಮುಕರಿಂದ ಗ್ಯಾಂಗ್ ರೇಪ್... ಅಟ್ಟಹಾಸಕ್ಕೆ ನಲುಗಿದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು - raped by three men
ಫೆಬ್ರವರಿ 25 ರಂದು 8 ನೇ ತರಗತಿಯ ವಿದ್ಯಾರ್ಥಿನಿ ಮೂವರು ಕಾಮುಕರಿಂದ ಅತ್ಯಾಚಾರಕ್ಕೊಳಗಾಗಿದ್ದ ವಿದ್ಯಾರ್ಥಿನಿವೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಫೆಬ್ರವರಿ 25 ರಂದು 8 ನೇ ತರಗತಿಯ ಈ ವಿದ್ಯಾರ್ಥಿನಿ ಮೇಲೆ ಮೂವರು ಕಾಮಾಂಧರು ಅಟ್ಟಹಾಸ ಮೆರೆದಿದ್ದರು. ಸಾಮೂಹಿಕ ಅತ್ಯಾಚಾರದಿಂದ ಖಿನ್ನತೆಗೆ ಒಳಗಾಗಿ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಾಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ.
ಈ ಕುರಿತು ಮಾತನಾಡಿರುವ ಬೆತುಲ್ನ ಸಹಾಯಕ ಪೊಲೀಸ್ ವರಿಷ್ಟಾಧಿಕಾರಿ ಶ್ರದ್ಧಾ ಜೋಶಿ, ಆಸ್ಪತ್ರೆಯಲ್ಲಿದ್ದ ಸಂತ್ರಸ್ತೆ ಸಾಯುವ ಮುನ್ನ, ತನ್ನ ಹೇಳಿಕೆಯಲ್ಲಿ ಆ ಮೂವರು ಆರೋಪಿಗಳ ಹೆಸರನ್ನು ಹೇಳಿದ್ದಳು. ಅದರ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಮೂರನೇ ಆರೋಪಿ ಬಂಧನಕ್ಕೆ ಬಲೆ ಬೀಸಿರುವುದಾಗಿ ಮಾಹಿತಿ ನೀಡಿದ್ದಾರೆ.