ಕರ್ನಾಟಕ

karnataka

By

Published : Mar 20, 2020, 12:49 PM IST

Updated : Mar 20, 2020, 1:28 PM IST

ETV Bharat / bharat

ವಿಶ್ವಾಸ ಮತಯಾಚನೆಗೂ ಮುನ್ನವೇ ಸಿಎಂ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ

ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ಸಂಜೆ 5 ಗಂಟೆಯೊಳಗೆ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಮುಕ್ತಾಯಗೊಳಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಆದರೆ ವಿಶ್ವಾಸ ಮತಯಾಚನೆಗೂ ಮುನ್ನವೇ ರಾಜ್ಯಪಾಲರಿಗೆ ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ಸಲ್ಲಿಸಿದ್ದಾರೆ.

CM Kamal Nath
ಸಿಎಂ ಕಮಲ್ ನಾಥ್

ಭೋಪಾಲ್ (ಮಧ್ಯಪ್ರದೇಶ): ರಾಜಕೀಯ ಕೋಲಾಹಲ ಸೃಷ್ಟಿಸಿರುವ ಮಧ್ಯಪ್ರದೇಶ ರಾಜ್ಯಕ್ಕೀಗ ಹೊಸ ತಿರುವು ಸಿಕ್ಕಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ ನೀಡಿದ್ದಾರೆ.

ಇದಕ್ಕೂ ಮೊದಲು ಸುದ್ದಿಗೋಷ್ಟಿ ನಡೆಸಿ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ ಕಮಲ್ ನಾಥ್ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಿದರು.

ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ಸಂಜೆ 5 ಗಂಟೆಯೊಳಗೆ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಮುಕ್ತಾಯಗೊಳಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಆದರೆ ವಿಶ್ವಾಸ ಮತಯಾಚನೆಯ ಸವಾಲು ಸ್ವಿಕರಿಸೋದಕ್ಕೂ ಮುನ್ನವೇ ಕಮಲ್ ನಾಥ್ ಶಸ್ತ್ರ ತ್ಯಜಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನನ್ನ ರಾಜ್ಯವನ್ನು ಸೋಲಿಸಿ ಗೆಲ್ಲುತ್ತೇನೆ ಎಂದು ಬಿಜೆಪಿ ಭಾವಿಸಿದೆ. ಹಾಗೆ ಮಾಡಲು ಎಂದಿಗೂ ಅವರಿಂದ ಸಾಧ್ಯವಿಲ್ಲ ಎಂದು ಗುಡುಗಿದರು.

Last Updated : Mar 20, 2020, 1:28 PM IST

ABOUT THE AUTHOR

...view details