ದೆಹಲಿ: ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನಾ ಸ್ಥಳ ಸಿಂಘು ಗಡಿಗೆ (ದೆಹಲಿ-ಹರಿಯಾಣ ಗಡಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರತಿಭಟನಾ ನಿರತ ರೈತರನ್ನು ಭೇಟಿಯಾದರು. ರೈತರ ಅನುಕೂಲಕ್ಕಾಗಿ ಮಾಡಿದ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು '"ನಾವು ರೈತರ ಎಲ್ಲಾ ಬೇಡಿಕೆಗಳನ್ನು ಬೆಂಬಲಿಸುತ್ತೇವೆ. ಅವರ ಸಮಸ್ಯೆಗಳು ಮತ್ತು ಬೇಡಿಕೆಗಳು ಮಾನ್ಯವಾಗಿವೆ. ನಮ್ಮ ಪಕ್ಷ ಮತ್ತು ನಾನು ಮೊದಲಿನಿಂದಲೂ ಅವರೊಂದಿಗೆ ನಿಂತಿದ್ದೇವೆ. ಅವರ ಪ್ರತಿಭಟನೆಯ ಆರಂಭದಲ್ಲಿ ದೆಹಲಿ ಪೊಲೀಸರು ಒಂಬತ್ತು ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು.