ಕರ್ನಾಟಕ

karnataka

ETV Bharat / bharat

ಮೇಕೆದಾಟು ನಮ್ಮ ನೆಲದ ಯೋಜನೆ, ತಮಿಳುನಾಡಿನ ಅಭಿಪ್ರಾಯಬೇಕಿಲ್ಲ: ಕುಮಾರಸ್ವಾಮಿ -

ಮೇಕೆದಾಟು ಯೋಜನೆಯಿಂದ 4.75 ಟಿಎಂಸಿ ನೀರು ಬೆಂಗಳೂರಿನ ನಿವಾಸಿಗರ ಕುಡಿಯಲು ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಿದ್ದೇವೆ. ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ನಮ್ಮ ನೆಲದಲ್ಲೇ ಅನುಷ್ಠಾನಗೊಳ್ಳುತ್ತಿರುವ ಯೋಜನೆ ಇದು. ಇದಕ್ಕೆ  ತಮಿಳುನಾಡಿನ ಅಭಿಪ್ರಾಯ ಪಡೆಯುವ ಅಗತ್ಯವಿರುವುದಿಲ್ಲ ಎಂದು ಸಿಎಂ ಕುಮಾರಸ್ವಾಮಿ ಅವರು ಜಲಶಕ್ತಿ ಸಚಿವರಿಗೆ ಮನವರಿಕೆ ಮಾಡಿದರು

ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ

By

Published : Jun 15, 2019, 2:24 PM IST

ನವದೆಹಲಿ:ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರಾಜ್ಯ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು.

ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಹಾಗೂ ಕೃಷ್ಣಾ ಮತ್ತು ಮಹದಾಯಿ ನ್ಯಾಯಾಧೀಕರಣ ಆದೇಶಗಳ ಗಜೆಟ್ ಅಧಿಸೂಚನೆ ಹೊರಡಿಸಿ, ಶೀಘ್ರವೇ ಯೋಜನೆಗಳ ಅನುಷ್ಠಾನಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶೇಖಾವತ್​ ಅವರು, 'ಮಹದಾಯಿ ಹಾಗೂ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವ ಬಗ್ಗೆ ಸಂಬಂಧಿಸಿದ ರಾಜ್ಯಗಳೊಂದಿಗೆ ಸಭೆ ಕರೆದು ಚರ್ಚಿಸುವುದಾಗಿ' ಭರವಸೆ ನೀಡಿದ್ದಾರೆ.

2019ರ ಜನವರಿ 18 ರಂದು ಮೇಕೆದಾಟು ಕಾಮಗಾರಿಯ ವಿಸ್ತೃತ ಯೋಜನಾ ವರದಿಯ ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಉದ್ದೇಶಿತ ಯೋಜನೆಯಿಂದ 4.75 ಟಿಎಂಸಿ ನೀರು ಬೆಂಗಳೂರಿನ ನಿವಾಸಿಗರ ಕುಡಿಯಲು ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಿದ್ದೇವೆ. ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ನಮ್ಮ ನೆಲದಲ್ಲೇ ಅನುಷ್ಠಾನಗೊಳ್ಳುತ್ತಿರುವ ಯೋಜನೆ. ಇದಕ್ಕೆ ತಮಿಳುನಾಡಿನ ಅಭಿಪ್ರಾಯ ಪಡೆಯುವ ಅಗತ್ಯವಿರುವುದಿಲ್ಲ. ಆದರಿಂದ, ಶೀಘ್ರವೇ ಯೋಜನೆ ಜಾರಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳು ಸಚಿವರನ್ನು ಕೋರಿದರು.

ಕೃಷ್ಣಾ ಜಲವಿವಾದಗಳ ನ್ಯಾಯಾಧೀಕರಣ-2 ರಾಜ್ಯಕ್ಕೆ 166 ಟಿಎಂಸಿ ನೀರನ್ನು ನೀರಾವರಿ ಮತ್ತು ಇತರ ಉದ್ದೇಶಗಳಿಗಾಗಿ ಹಂಚಿಕೆಮಾಡಿದೆ. ಆದರೆ, ನ್ಯಾಯಾಧೀಕರಣದ ಗಜೆಟ್ ಅಧಿಸೂಚನೆ ಹೊರಡಿಸದ ಕಾರಣ ನಮ್ಮ ಪಾಲಿನ ನೀರಿನ ಸದ್ಬಳಕೆ ಸಾಧ್ಯವಾಗುತ್ತಿಲ್ಲ. ಮಹದಾಯಿ ಜಲವಿವಾದ ನ್ಯಾಯಾಧೀಕರಣ ಸಹ ರಾಜ್ಯಕ್ಕೆ 13.2 ಟಿಎಂಸಿ ನೀರು ಹಂಚಿಕೆ ಮಾಡಿದ್ದರೂ ಗಜೆಟ್ ಅಧಿಸೂಚನೆ ಬಂದಿಲ್ಲ. ಪರಿಣಾಮ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ನೀರಿನ ಅಭಾವ ಉಂಟಾಗಿದೆ. ಪಟ್ಟಣ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಕಳಸಾ-ಬಂಡೂರಿ ನಾಲಾ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದ ಹಿತದೃಷ್ಟಿಯಿಂದ ಶೀಘ್ರವೇ ಗಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ಕಾವೇರಿ ಜಲವಿವಾದ ನ್ಯಾಯಾಧೀಕರಣದ ಹಂಚಿಕೆಗೆ ಸಂಬಂಧಿಸಿದಂತೆ ಈ ಪ್ರದೇಶದ ರಾಜ್ಯಗಳು ಪ್ರಕರಣಗಳನ್ನು ದಾಖಲಿಸಿದ್ದಾಗ ನ್ಯಾಯಾಲಯವು ಅಂತಿಮ ತೀರ್ಪಿಗೆ ಒಳಪಡುವ ಷರತ್ತು ವಿಧಿಸಿ, ಗಜೆಟ್ ಅಧಿಸೂಚನೆ ಹೊರಡಿಸಿತ್ತು. ಅದೇ ಮಾದರಿಯಲ್ಲಿ ಕೃಷ್ಣಾ ಹಾಗೂ ಮಹದಾಯಿ ನ್ಯಾಯಾಧೀಕರಣಗಳ ನೀರು ಹಂಚಿಕೆ ಕುರಿತಂತೆ ನ್ಯಾಯಾಲಯದ ತೀರ್ಪು ನಿರೀಕ್ಷಿಸಿ, ಗಜೆಟ್ ಅಧಿಸೂಚನೆ ಹೊರಡಿಸುವಂತೆ ಕುಮಾರಸ್ವಾಮಿ ಮನವರಿಕೆ ಮಾಡಿದರು.

For All Latest Updates

TAGGED:

ABOUT THE AUTHOR

...view details