ಕರ್ನಾಟಕ

karnataka

By

Published : Sep 24, 2020, 9:40 AM IST

Updated : Sep 24, 2020, 10:12 AM IST

ETV Bharat / bharat

ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಿಎಸ್​ವೈ, ಜಗನ್​ ಮೋಹನ್​ ರೆಡ್ಡಿ

ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಆಂಧ್ರ ಪ್ರದೇಶ ಸಿಎಂ ಜಗನ್​ ಮೋಹನ್​ ರೆಡ್ಡಿ ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

Cm yadiyurappa to lays foundation stone for Karnataka bhavan
ಕರ್ನಾಟಕ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೆರಿಸಿದ ಬಿಎಸ್​ವೈ

ತಿರುಪತಿ (ಆಂಧ್ರಪ್ರದೇಶ):ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಸಿಎಂ ಬಿ.ಎಸ್​. ಯಡಿಯೂರಪ್ಪ ಮತ್ತು ಆಂಧ್ರ ಪ್ರದೇಶ ಸಿಎಂ ಜಗನ್​ ಮೋಹನ್ ರೆಡ್ಡಿ ಶಂಕು ಸ್ಥಾಪನೆ ನೆರವೇರಿಸಿದರು.

ಬೆಳಗ್ಗೆ 8:30ಕ್ಕೆ ಬಿ.ಎಸ್.ಯಡಿಯೂರಪ್ಪ ಮತ್ತು ಆಂಧ್ರ ಪ್ರದೇಶ ಸಿಎಂ ಜಗನ್​ ಮೋಹನ್​ ರೆಡ್ಡಿ ಕರ್ನಾಟಕ ಭವನ ನಿರ್ಮಾಣ ಭೂಮಿ ಪೂಜೆ ನೆರವೇರಿಸಿದರು. 7.5 ಎಕರೆ ಪ್ರದೇಶದಲ್ಲಿ ಈ ವಸತಿ ಗೃಹ ನಿರ್ಮಾಣವಾಗಲಿದ್ದು, ತಿರುಪತಿಯಲ್ಲಿ ಕರ್ನಾಟಕದ ಭಕ್ತರಿಗೆ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲು, ಈ ಭವನ ನಿರ್ಮಾಣ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಿಎಸ್​ವೈ

3 ಲಕ್ಷ ಚದರ ಅಡಿ ಜಾಗದಲ್ಲಿ ಸಂಪಿಗೆ, ಸೇವಂತಿಗೆ, ತಾವರೆ ಮತ್ತು ಮಲ್ಲಿಗೆ ಹೆಸರಿನ ನಾಲ್ಕು ಭವ್ಯ ಕಟ್ಟಡಗಳು ತಲೆ ಎತ್ತಲಿವೆ. ಈ ನಾಲ್ಕು ಹೊಸ ಕಟ್ಟಡ ನಿರ್ಮಾಣ ಹೊಣೆಯನ್ನು ಟಿಟಿಡಿ ವಹಿಸಿಕೊಂಡಿದೆ. ಈ ಹಿಂದೆ ಇದ್ದ ಕನಕಾಂಬರ ಎಂಬ ಹೆಸರಿನ ಕಟ್ಟಡವನ್ನು ನವೀಕರಣ ಮಾಡಲಾಗುತ್ತದೆ. ಈ ಹಿಂದೆ ಅಂದರೆ 1964ರಲ್ಲಿ ನ್ಯೂ ಮೈಸೂರು ಚೌಲ್ಟ್ರಿಗೆ ಅಂದಿನ ಪ್ರಧಾನಿ ಲಾಲ್​ ಬಹದ್ದೂರ್​ ಶಾಸ್ತ್ರಿಯವರು ಶಂಕುಸ್ಥಾಪನೆ ನೆರವೇರಿಸಿದ್ದರು.

ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಿಎಸ್​ವೈ,

ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರು ತೆರಳುತ್ತಾರೆ. ಆದರೆ ಎಲ್ಲರಿಗೂ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳಲು ಕೊಠಡಿಗಳು ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಭಕ್ತರಿಗೆ ಕರ್ನಾಟಕ ಭವನದಲ್ಲೇ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದ್ದು, ನೂತನ ಭವನ ನಿರ್ಮಾಣವಾದರೆ ಪ್ರತೀ ದಿನ 1,800 ಭಕ್ತರು ಉಳಿದುಕೊಳ್ಳಬಹುದು.

ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ ಆಂಧ್ರ ಸಿಎಂ ಜಗನ್​ ಮೋಹನ್​ ರೆಡ್ಡಿ,

ಕಾರ್ಯಕ್ರಮದಲ್ಲಿ ಎರಡೂ ರಾಜ್ಯಗಳ ಮುಂಖ್ಯಮಂತ್ರಿಗಳಲ್ಲದೆ ಟಿಟಿಡಿ ಚೇರ್​ಮನ್​ ಸುಬ್ಬಾ ರೆಡ್ಡಿ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಗಣ್ಯರು ಹಾಜರಿದ್ದರು. ಶಿಲಾನ್ಯಾಸ ಕಾರ್ಯಕ್ರಮಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಹಾಗೂ ಆಂಧ್ರಪ್ರದೇಶ ಸಿಎಂ ಜಗನಮೋಹನ್​ ರೆಡ್ಡಿ ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Last Updated : Sep 24, 2020, 10:12 AM IST

ABOUT THE AUTHOR

...view details