ತಿರುಪತಿ (ಆಂಧ್ರಪ್ರದೇಶ) :ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ನಿನ್ನೆ ವಿಶೇಷ ವಿಮಾನದ ಮೂಲಕ ಸಿಎಂ ತಿರುಪತಿಗೆ ತೆರಳಿದ್ದರು.
ಸಿಎಂ ಬಿಎಸ್ವೈ ಇವತ್ತು ಬೆಳಗ್ಗೆ 8:30ಕ್ಕೆ ಕರ್ನಾಟಕ ಭವನ ನಿರ್ಮಾಣ ಭೂಮಿ ಪೂಜೆ ನೆರವೇರಿಸಲಿದ್ದಾರೆ. ನಂತರ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಈ ಸಮಾರಂಭದಲ್ಲಿ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸಹ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ತಿರುಪತಿಗೆ ಬಂದಿಳಿದ ಸಿಎಂ ಬಿಎಸ್ವೈ; ನಾಳೆ ಕರ್ನಾಟಕ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ
ತಿರುಪತಿಯಲ್ಲಿ ಕರ್ನಾಟಕದ ಭಕ್ತರಿಗೆ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಕರ್ನಾಟಕ ಭವನ ನಿರ್ಮಾಣ ಮಾಡಲು ನಿರ್ಧಾರ ಮಾಡಿದೆ. 7.5 ಎಕರೆ ಪ್ರದೇಶದಲ್ಲಿ ಈ ವಸತಿ ಗೃಹ ನಿರ್ಮಾಣವಾಗಲಿದೆ.
ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರು ತೆರಳುತ್ತಾರೆ. ಆದರೆ ಎಲ್ಲರಿಗೂ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳಲು ಕೊಠಡಿಗಳು ಸಿಗಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಭಕ್ತರಿಗೆ ಕರ್ನಾಟಕ ಭವನದಲ್ಲೇ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.