ನವದೆಹಲಿ:ಉತ್ತರ ಪ್ರದೇಶದಲ್ಲಿ ಪದೇ ಪದೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವುದನ್ನು ಖಂಡಿಸಿರುವ ಕಾಂಗ್ರೆಸ್, ಸರ್ಕಾರವನ್ನು ತಕ್ಷಣ ವಜಾಗೊಳಿಸುವಂತೆ ಆಗ್ರಹಿಸಿದೆ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡೆದ ಘಟನೆಯ ಸುಮಾರು ಒಂದು ತಿಂಗಳ ನಂತರ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ಆಕೆಯ ಸ್ವಂತ ಸೋದರ ಸಂಬಂಧಿಯೇ ಅತ್ಯಾಚಾರ ಎಸಗಿದ ಮತ್ತೊಂದು ಘಟನೆ ವರದಿಯಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಅಪರಾಧಿಗಳಿಗೆ ಬಲವಾದ ಸಂದೇಶವನ್ನು ಕಳುಹಿಸುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರವನ್ನು ತಕ್ಷಣ ವಜಾಗೊಳಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.