ಗ್ವಾಲಿಯರ್ :ರಾಜ್ಯಸಭಾ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರದಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಮೊಕದ್ದಮೆ ಮರೆಮಾಚಿದ್ದಾರೆ ಎಂದು ಆರೋಪಿಸಿ ದಿಗ್ವಿಜಯ ಸಿಂಗ್ ಆಪ್ತ ಕಾಂಗ್ರೆಸ್ ಮುಖಂಡರೊಬ್ಬರು ಅರ್ಜಿ ಸಲ್ಲಿಸಿದ್ದಾರೆ.
ಗೋಪಿಲಾಲ್ ಭಾರ್ತಿಯಾ ಎಂಬುವರು ತಮ್ಮ ವಕೀಲ ಕುಬರ್ ಬೌದ್ಧ್ ಮೂಲಕ ಗ್ವಾಲಿಯರ್ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜನ ಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ಆಲಿಸಲು ಗೊತ್ತುಪಡಿಸಿದ ಭೋಪಾಲ್‌ನಲ್ಲಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ವರ್ಗಾಯಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.