ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಗದ್ದುಗೆಗೇರಲು ಎಲ್ಲಾ ಪಕ್ಷಗಳು ಕಸರತ್ತು ಪ್ರಾರಂಭಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಪಕ್ಷದ ಅಭ್ಯರ್ತಿಗಳ ಪರ ಪ್ರಚಾರಕ್ಕಾಗಿ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿ ಬಿಡುಗಡೆ ಮಾಡಿವೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ 40 ಕ್ಯಾಂಪೇನರ್ಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಅಚ್ಚರಿ ಎಂಬಂತೆ ಪಂಜಾಬ್ನಲ್ಲಿ ಮುಖ್ಯಮಂತ್ರಿಯೊಂದಿಗೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಕೂಡ ಪಟ್ಟಿಯಲ್ಲಿದ್ದಾರೆ.
ಇನ್ನುಳಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಕ್ಯಾಪ್ಟನ್ ಅಮರೀಂದರ್ ಸಿಂಗ್, ಕಮಲ್ನಾಥ್, ಭೂಪೇಶ್ ಬಗೇಲ್ ಕೂಡ ಕೈ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಪ್ರಚಾರ ನಡೆಸಲಿದ್ದಾರೆ. ಇವರ ಜೊತೆಯಲ್ಲಿ ಹೇಮಾ ಮಾಲಿನಿ, ಸನ್ನಿ ಡಿಯೋಲ್, ಹನ್ಸ್ ರಾಜ್ ಹ್ಯಾನ್ಸ್, ಗೌತಮ್ ಗಂಭೀರ್, ರವಿ ಕಿಶನ್ ಮತ್ತು ದಿನೇಶ್ ಲಾಲ್ ಯಾದವ್, ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್ ಪ್ರಚಾರಕರು ಕ್ಯಾಂಪೇನ್ ನಡೆಸಲಿದ್ದಾರೆ.