ನವದೆಹಲಿ:ಮುಂದಿನ ತಿಂಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆ ಗೆಲ್ಲಲು ಕಾಂಗ್ರೆಸ್ ಭರದ ಸಿದ್ಧತೆ ನಡೆಸುತ್ತಿವೆ.
ಕಳೆದ 2015ರ ವಿಧಾನಸಭಾ ಚುನಾವನೆಯಲ್ಲಿ ಕನಿಷ್ಠ ಒಂದು ಸ್ಥಾನವನ್ನು ಗೆಲ್ಲುವಲ್ಲೂ ರಾಷ್ಟ್ರಿಯ ಪಕ್ಷ ಕಾಂಗ್ರೆಸ್ ವಿಫಲವಾಗಿತ್ತು. ಹೀಗಾಗಿ ಆಡಳಿತರೂಢ ಎಎಪಿ ಹಾಗೂ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಭಾರಿ ಕಸರತ್ತು ನಡೆಸುತ್ತಿದ್ದಾರೆ.
ಕಳೆದ ಶನಿವಾರ ದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, ಈ ಬಾರಿಯ ಚುನಾವಣೆ ಸಂಬಂಧ ಚರ್ಚೆಗಳು ನಡೆದಿವೆ. ಕನಿಷ್ಠ 18 ಕ್ಷೇತ್ರಗಳಿಗೆ ಬೇಕಾದ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆದಿದೆ. ಕಾಂಗ್ರೆಸ್ ಚುನಾವಣಾ ಸಮಿತಿಯ ಮುಂದಿನ ಸಭೆ ಜನವರಿ 14ರಂದು ನಡೆಯಲಿದ್ದು, ಕನಿಷ್ಠ 18 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಫೆಬ್ರವರಿ 8 ರಂದು ಮತದಾನ...