ಕರ್ನಾಟಕ

karnataka

ETV Bharat / bharat

ರಾಹುಲ್ ಗಾಂಧಿ ಜತೆ ಸಂವಾದ ನಡೆಸಿದ್ದ ವಲಸೆ ಕಾರ್ಮಿಕರು ಪೊಲೀಸ್​​ ವಶಕ್ಕೆ: ಕಾಂಗ್ರೆಸ್ ಆರೋಪ - ವಲಸೆ ಕಾರ್ಮಿಕರ ಜತೆ ರಾಹುಲ್ ಗಾಂಧಿ ಮಾತುಕತೆ

ರಾಹುಲ್ ಗಾಂಧಿ ಜೊತೆ ಮಾತನಾಡಿದ್ದ ವಲಸೆ ಕಾರ್ಮಿಕರನ್ನು ಪೊಲೀಸರು ಮೇಲಿನವರ ಆದೇಶದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.

By

Published : May 16, 2020, 11:30 PM IST

Updated : May 17, 2020, 11:46 AM IST

ನವದೆಹಲಿ: ಕಾಂಗ್ರೆಸ್​ ಮುಖಂಡ ರಾಹುಲ್ ಗಾಂಧಿ ಅವರ ಜೊತೆ ಸಂವಾದ ನಡೆಸಿದ್ದ ವಲಸಿಗ ಕಾರ್ಮಿಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕಾಂಗ್ರೆಸ್​ ಪಕ್ಷ ಆರೋಪಿಸಿದೆ.

ದೆಹಲಿಯ ಸುಖದೇವ್ ವಿಹಾರ್ ಮೇಲ್ಸೇತುವೆ ಬಳಿ ಇದ್ದ ವಲಸೆ ಕಾರ್ಮಿಕರನ್ನು ಶನಿವಾರ ರಾಹುಲ್ ಗಾಂಧಿ ಭೇಟಿಯಾದರು. ರಾಹುಲ್ ಗಾಂಧಿ ಬಿಳಿ ಕುರ್ತಾ, ಕಪ್ಪು ಪ್ಯಾಂಟ್ ಧರಿಸಿ ಫುಟ್​ಪಾಥ್ ಮೇಲೆ ಕೂತು ಕಾರ್ಮಿಕರ ಜೊತೆ ಸಂವಾದ ನಡೆಸಿದರು. ಅವರ ಕಷ್ಟಕೋಟಲೆಗಳನ್ನ ಆಲಿಸಿದರು.

ವಲಸೆ ಕಾರ್ಮಿಕರ ಜತೆ ರಾಹುಲ್ ಗಾಂಧಿ ಮಾತುಕತೆ

ರಾಹುಲ್ ಗಾಂಧಿ ಜೊತೆ ಮಾತನಾಡಿದ್ದ ವಲಸೆ ಕಾರ್ಮಿಕರನ್ನು ಪೊಲೀಸರು ಮೇಲಿನವರ ಆದೇಶದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.

ಪೊಲೀಸ್ ಮೂಲಗಳು ಕಾಂಗ್ರೆಸ್ ಆರೋಪವನ್ನು ಸಂಪೂರ್ಣವಾಗಿ ನಿರಾಕರಿಸಿದ್ದು, ಕಾಂಗ್ರೆಸ್ ಸ್ಥಳದಿಂದ ಹೊರಬಂದ ನಂತರವೂ ಆ ವಲಸೆ ಕಾರ್ಮಿಕರು ಸ್ಥಳದಲ್ಲೇ ಇದ್ದುದರಿಂದ ಈ ಬಗ್ಗೆ ತಪ್ಪು ಮಾಹಿತಿ ಹರಡಿದೆ ಎಂದು ಹೇಳಿದ್ದಾರೆ.

ನಿಯಮಗಳ ಪ್ರಕಾರ, ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರಿಗೆ ವಾಹನ ಹತ್ತಲು ಅವಕಾಶವಿರಲಿಲ್ಲ. ಇದನ್ನು ಕೆಲವು ಕಾಂಗ್ರೆಸ್ ಕಾರ್ಯಕರ್ತರು ನೀಡಿದರು. ಈ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಕರೆದೊಯ್ಯಲು ಕಾಂಗ್ರೆಸ್​ ಪಕ್ಷ ವ್ಯವಸ್ಥೆ ಮಾಡಿತು.

ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ವಿಡಿಯೋವೊಂದರಲ್ಲಿ, ರಾಹುಲ್ ಗಾಂಧಿ ಅವರು ಕಳೆದ 50 ದಿನಗಳ ಲಾಕ್‌ಡೌನ್‌ನಿಂದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಲಿಸಿದರು. ನಾವು ನಮ್ಮ ಊರುಗಳನ್ನ ತಲುಪಲು ಸೂಕ್ತವಾದ ವ್ಯವಸ್ಥೆಗಳನ್ನು ಮಾಡುವುದಾಗಿ ಭರವಸೆ ನೀಡಿದರು ಎಂದು ವಲಸೆ ಕಾರ್ಮಿಕರೊಬ್ಬರು ವಿವರಿಸಿದರು.

ಲಾಕ್​ಡೌನ್​ ಅವಧಿಯಲ್ಲಿ ಕಾಂಗ್ರೆಸ್ ಮುಖಂಡರು ವಲಸೆ ಕಾರ್ಮಿಕರ ಬಿಕ್ಕಟ್ಟಿನ ಬಗ್ಗೆ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಕಾರ್ಮಿಕರು ತಮ್ಮ ತವರು ರಾಜ್ಯಗಳಿಗೆ ಸುರಕ್ಷಿತವಾಗಿ ಮರಳುವಂತೆ ಆರ್ಥಿಕ ನೆರವು ನೀಡಲು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

Last Updated : May 17, 2020, 11:46 AM IST

ABOUT THE AUTHOR

...view details