ಕರ್ನಾಟಕ

karnataka

ETV Bharat / bharat

ಕಾಂಗ್ರೆಸ್ ಪಕ್ಷ 'ಪಾಕಿಸ್ತಾನದ ವಕ್ತಾರ' ಆಗಿ ಮಾರ್ಪಟ್ಟಿದೆ: ಜೆ ಪಿ ನಡ್ಡಾ - ಪುಲ್ವಾಮಾ ದಾಳಿ ಲೇಟೆಸ್ಟ್ ನ್ಯೂಸ್

ಪಾಕ್ ಸಚಿವ ತಮ್ಮ ಸಂಸತ್​​ನಲ್ಲಿ ನಡೆದ ಚರ್ಚೆಯ ವೇಳೆ ಪುಲ್ವಾಮಾ ದಾಳಿಯಲ್ಲಿ ತಮ್ಮ ದೇಶದ ಪಾತ್ರವನ್ನು ಒಪ್ಪಿಕೊಂದ್ದಾರೆ. ಹಿಂದೆ ಪುಲ್ವಾಮಾ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ಮತ್ತು ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಜೆ ಪಿ ನಡ್ಡಾ ಕಿಡಿಕಾರಿದ್ದಾರೆ.

Congress has become Pakistan's spokesperson
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

By

Published : Nov 1, 2020, 12:01 PM IST

ಹಾಜಿಪುರ (ಬಿಹಾರ): ಪುಲ್ವಾಮಾ ದಾಳಿ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕಾಂಗ್ರೆಸ್ ಇತ್ತೀಚಿನ ದಿನಗಳಲ್ಲಿ "ಪಾಕಿಸ್ತಾನದ ವಕ್ತಾರ" ಆಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಚುನಾವಣಾ ಱಲಿಯನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ, ಪುಲ್ವಾಮಾ ವಿಚಾರದಲ್ಲಿ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ಮತ್ತು ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ರು.

ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ತಮ್ಮ ಸಂಸತ್​ನಲ್ಲಿ ನಡೆದ ಚರ್ಚೆಯ ವೇಳೆ ಪುಲ್ವಾಮಾ ದಾಳಿಯಲ್ಲಿ ತಮ್ಮ ದೇಶದ ಪಾತ್ರವನ್ನು ಒಪ್ಪಿಕೊಂಡ ನಂತರ ನಡ್ಡಾ ಈ ಹೇಳಿಕೆ ನೀಡಿದ್ದಾರೆ.

ಇದೇ ವೇಳೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಮೂರನೇ ಎರಡರಷ್ಟು ಬಹುಮತ ದೊರೆಯುವ ಬಗ್ಗೆ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು ಮತ್ತು ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಸಿಕ್ಕರೂ "ನಿತೀಶ್ ಕುಮಾರ್ ನಮ್ಮ ನಾಯಕರಾಗಲಿದ್ದಾರೆ" ಎಂದಿದ್ದಾರೆ.

ABOUT THE AUTHOR

...view details