ನವದೆಹಲಿ :ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರನ್ನು ಗುರಗಾಂವ್ನ ಮೆಡಂತಾ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಅಕ್ಟೋಬರ್ 1ರಂದು ಅಹ್ಮದ್ ಪಟೇಲ್ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದರು.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಐಸಿಯುಗೆ ಶಿಫ್ಟ್ - Congress Leader Ahmed Patel tested corona positive
ಆನಂದ್ ಶರ್ಮಾ ಮತ್ತು ಶಶಿ ತರೂರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪಟೇಲ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದಾರೆ..
ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ವೈದ್ಯಕೀಯ ವೀಕ್ಷಣೆಯಲ್ಲಿದ್ದಾರೆ. ಅಹ್ಮದ್ ಪಟೇಲ್ ಅವರು ಕೆಲವು ವಾರಗಳ ಹಿಂದೆ ಕೋವಿಡ್-19 ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ. ಈಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುರಗಾಂವ್‌ನ ಮೆಡಂತಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ವೈದ್ಯಕೀಯ ವೀಕ್ಷಣೆಯಲ್ಲಿದ್ದಾರೆ ಎಂದು ಅವರ ಮಗ ಫೈಸಲ್ ಪಟೇಲ್ ಪೋಸ್ಟ್ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಆನಂದ್ ಶರ್ಮಾ ಮತ್ತು ಶಶಿ ತರೂರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪಟೇಲ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದಾರೆ.