ಕರ್ನಾಟಕ

karnataka

ETV Bharat / bharat

ಕಾಂಗ್ರೆಸ್​ ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ಗೂ ಕೊರೊನಾ

ಕಾಂಗ್ರೆಸ್​​ನ ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ಗೂ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ.

Congress leader Ghulam Nabi
Congress leader Ghulam Nabi

By

Published : Oct 16, 2020, 4:20 PM IST

ನವದೆಹಲಿ:ಮಹಾಮಾರಿ ಕೊರೊನಾ ವೈರಸ್​​ ಕಾಂಗ್ರೆಸ್​ ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ಗೂ ತಗುಲಿದ್ದು, ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಟ್ವಿಟರ್​ನಲ್ಲಿ ಮಾಹಿತಿ ಶೇರ್​ ಮಾಡಿಕೊಂಡಿದ್ದಾರೆ.

ನನಗೆ ಕೋವಿಡ್​-19 ಕಾಣಿಸಿಕೊಂಡಿದ್ದು, ಸದ್ಯ ಹೋಂ ಕ್ವಾರಂಟೈನ್​​ನಲ್ಲಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್​​ ಮಾರ್ಗಸೂಚಿ ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಬಿಹಾರದಲ್ಲಿ ಸದ್ಯ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್​ನ ಸ್ಟಾರ್​​ ಪ್ರಚಾರಕರಾಗಿ ಗುಲಾಂ ನಬಿ ಆಜಾದ್​ ಲಿಸ್ಟ್​ನಲ್ಲಿದ್ದಾರೆ. ಆದರೆ, ಅವರಿಗೆ ಕೊರೊನಾ ವೈರಸ್ ಕಾಣಿಸಿಕೊಂಡಿರುವ ಕಾರಣ ಮೊದಲನೇ ಹಂತದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದು ಅನುಮಾನ ಎಂಬ ಮಾತು ಕೇಳಿ ಬರುತ್ತಿದೆ.

ABOUT THE AUTHOR

...view details