ದೆಹಲಿ:ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಬಳಿಕ ಮತ್ತೆ ಇಡಿ ಕಚೇರಿಗೆ ಕರೆದುಕೊಂಡು ಹೋಗಲಾಗಿದೆ.
ಚಿಕಿತ್ಸೆ ಬಳಿಕ ಮತ್ತೆ ಇಡಿ ಕಚೇರಿಗೆ ಚಿದಂಬರಂ - Congress leader P Chidambaram has been taken to AIIMS
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಇಡಿಯಿಂದ ಬಂಧನಕ್ಕೊಳಗಾಗಿದ್ದ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಮತ್ತೆ ಇಡಿ ಕಚೇರಿಗೆ ಕರೆದೊಯ್ಯಲಾಗಿದೆ.
ಪಿ. ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ)ದಿಂದ ಬಂಧನಕ್ಕೊಳಗಾಗಿದ್ದ ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿಡಲಾಗಿತ್ತು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಇನ್ಸ್ಟಿಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್) ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.
ಸದ್ಯ ಚಿದಂಬರಂ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಯ ಬಳಿಕ ಅವರನ್ನು ಮತ್ತೆ ಇಡಿ ಕಚೇರಿಗೆ ಕರೆತರಲಾಗಿದೆ.
Last Updated : Oct 28, 2019, 9:16 PM IST