ಅಹಮದಾಬಾದ್ (ಗುಜರಾತ್):ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಲ್ಲಿ ನಡೆಯಲಿದೆ. ಈ ಹಿನ್ನೆಲೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ.
ಇದೀಗ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಗುಜರಾತ್ಗೆ ಬಂದಿಳಿದಿದ್ದು, ಅಹ್ಮದ್ ಪಟೇಲ್ರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ. ಅಹ್ಮದ್ ಪಟೇಲ್ ಹುಟ್ಟೂರಾದ ಪಿರಾಮಲ್ ಗ್ರಾಮದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದ್ದು, ಡಿಕೆಶಿ ಅಂತಿಮ ದರ್ಶನ ಪಡೆಯಲಿದ್ದಾರೆ.