ನವದೆಹಲಿ/ಬೆಂಗಳೂರು:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು 'ಕೈ' ನಾಯಕ ಆನಂದ್ ಶರ್ಮ ಹಾಗೂ ಅಹ್ಮದ್ ಪಟೇಲ್ ಹಾಗೂ ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಭೇಟಿ ಮಾಡಿದ್ದಾರೆ.
'ಕೈ' ನಾಯಕರಿಂದ ಡಿಕೆಶಿ ಭೇಟಿ: ನ್ಯಾಯದ ವಿಶ್ವಾಸದಲ್ಲಿ ಕಾಂಗ್ರೆಸ್ - ತಿಹಾರ್ ಜೈಲಿನಲ್ಲಿ ಡಿಕೆಶಿ
ಡಿಕೆಶಿ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಆನಂದ್ ಶರ್ಮ, ಶಿವಕುಮಾರ್ ಕೆಲ ಹೊತ್ತು ಮಾತನಾಡಿದ್ದೇವೆ. ಡಿಕೆಶಿ ಅವರಿಗೆ ಅನ್ಯಾಯವಾಗಿದೆ. ಅವರ ವೈಯಕ್ತಿಕ ಸ್ವಾತಂತ್ರ್ಯ, ಆರೋಗ್ಯ ಹಾಗೂ ಮೂಲಭೂತ ಹಕ್ಕುಗಳನ್ನು ಇಲ್ಲಿ ಪರಿಗಣಿಸಿಲ್ಲ. ಆದರೆ ಕೋರ್ಟ್ ನ್ಯಾಯ ನೀಡುವ ವಿಶ್ವಾಸವಿದೆ ಎಂದಿದ್ದಾರೆ.
'ಕೈ' ನಾಯಕರಿಂದ ಡಿಕೆಶಿ ಭೇಟಿ
ಡಿಕೆಶಿ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಆನಂದ್ ಶರ್ಮ, ಶಿವಕುಮಾರ್ ಕೆಲ ಹೊತ್ತು ಮಾತನಾಡಿದ್ದೇವೆ. ಡಿಕೆಶಿ ಅವರಿಗೆ ಅನ್ಯಾಯವಾಗಿದೆ. ಅವರ ವೈಯಕ್ತಿಕ ಸ್ವಾತಂತ್ರ್ಯ, ಆರೋಗ್ಯ ಹಾಗೂ ಮೂಲಭೂತ ಹಕ್ಕುಗಳನ್ನು ಇಲ್ಲಿ ಪರಿಗಣಿಸಿಲ್ಲ. ಆದರೆ ಕೋರ್ಟ್ ನ್ಯಾಯ ನೀಡುವ ವಿಶ್ವಾಸವಿದೆ ಎಂದಿದ್ದಾರೆ.
ಬುಧವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಡಿಕೆಶಿ, ಅ.1ರಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದೆ.