ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿಕೆಶಿ ಸಹೋದರ ಸಂಸದ ಡಿ.ಕೆ.ಸುರೇಶ್ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ಡಿಕೆಶಿ ಆಯ್ತು.. ಈಗ ಇಡಿ ಮುಂದೆ ಡಿ.ಕೆ.ಸುರೇಶ್ ಹಾಜರು!
ಡಿಕೆಶಿ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಹೋದರ ಡಿ.ಕೆ.ಸುರೇಶ್ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ಡಿ.ಕೆ.ಸುರೇಶ್
ಡಿ.ಕೆ.ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಚೇರಿಗೆ ಹಾಜರಾಗುವಂತೆ ಸಂಸದ ಸುರೇಶ್ಗೆ ಇಡಿ ನೋಟಿಸ್ ನೀಡಿತ್ತು. ಹೀಗಾಗಿ ನವದೆಹಲಿಯಲ್ಲಿರುವ ಇಡಿ ಕಚೇರಿಗೆ ಡಿ.ಕೆ.ಸುರೇಶ್ ಹಾಜರಾಗಿದ್ದು, ವಿಚಾರಣೆ ಎದುರಿಸಲಿದ್ದಾರೆ.
ಆದ್ರೆ ಈ ಹಿಂದೆ ಮಾತನಾಡಿದ್ದ ಡಿ.ಕೆ.ಸುರೇಶ್ ತಮಗೆ ಇಡಿ ಅಧಿಕಾರಿಗಳಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಹೇಳಿದ್ದರು. ಒಂದಿದ್ದರೆ ಇಡಿ ಮುಂದೆ ಹಾಜರಾಗಿ ಅವರು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವುದಾಗಿ ಡಿಕೆ ಸುರೇಶ್ ಸ್ಪಷ್ಟಪಡಿಸಿದ್ದರು.