ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆ ಹತ್ತಿಕ್ಕಲು ವಿಫಲಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದ್ದು, ಇದೀಗ ಅದಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.
ದೆಹಲಿ ಹಿಂಸಾಚಾರ: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ - ಲೋಕಸಭೆಯಲ್ಲಿ ಗದ್ದಲ
ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ಮಾಡುತ್ತಿರುವ ಕಾಂಗ್ರೆಸ್ ಸಂಸದರು ಇದೀಗ ಪಾರ್ಲಿಮೆಂಟ್ ಎದುರುಗಡೆ ಪ್ರತಿಭಟನೆ ನಡೆಸುತ್ತಿದ್ದಾರೆ.
Congress MPs protest in Parliament
ಹಿಂಸಾಚಾರದ ವೇಳೆ 53ಕ್ಕೂ ಹೆಚ್ಚು ಅಮಾಯಕರು ಪ್ರಾಣ ಕಳೆದುಕೊಂಡಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದರ ಮಧ್ಯೆ ಆಸ್ತಿ - ಪಾಸ್ತಿ ನಾಶವಾಗಿದ್ದು, ಇದನ್ನ ಹತೋಟಿ ತರುವಲ್ಲಿ ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್ ಶಾ ಸಂಪೂರ್ಣವಾಗಿ ವಿಫಲಗೊಂಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಜತೆಗೆ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪಾರ್ಲಿಮೆಂಟ್ ಎದುರುಗಡೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಿನ್ನೆ ಕಲಾಪ ನಡೆಯುತ್ತಿದ್ದ ವೇಳೆ ಅಶಿಸ್ತು ತೋರಿರುವ ಆರೋಪದ ಮೇಲೆ ಕಾಂಗ್ರೆಸ್ನ 7 ಸಂಸದರನ್ನ ಅಮಾನತುಗೊಳಿಸಲಾಗಿದೆ.