ನವದೆಹಲಿ:ಲೋಕಸಭಾ ಚುನಾವಣೆ ಸೋಲು ಹಾಗೂ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿರುವ ವಿಷಯವನ್ನಿಟ್ಟುಕೊಂಡು ಮಧ್ಯಪ್ರದೇಶ ಕಾಂಗ್ರೆಸ್ ಮುಖಂಡ ಮಾತನಾಡಿದ್ದಾರೆ.
ಕಾಂಗ್ರೆಸ್ ಪಕ್ಷ ಮುಂದಿನ ವರ್ಷಗಳಲ್ಲಿ ಉತ್ತಮ ಕೆಲಸ ಮಾಡಬೇಕಾಗಿದ್ದು, ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ವಯಂ ಆತ್ಮಾವಲೋಕನದ ಅವಶ್ಯಕತೆ ಇದೆ ಎಂದು ಸಿಂಧಿಯಾ ಹೇಳಿದ್ದಾರೆ. ಇದೇ ವೇಳೆ ಪಕ್ಷದ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿಕೆಗೆ ತಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.