ಗೊಲಘಾಟ್ (ಅಸ್ಸೋಂ): ಕಳೆದ ಚುನಾವಣೆಯಲ್ಲಿ ಎಲ್ಲರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ಹಾಕ್ತೀನಿ ಅಂತ ಪ್ರಧಾನಿ ಮೋದಿ ಸುಳ್ಳು ಭರವಸೆ ನೀಡಿದ್ರು. ಆದರೆ, ನಾವು ಖಂಡಿತ ಕಡಿಮೆ ಆದಾಯ ಇರುವವರಿಗೆ 5 ವರ್ಷಕ್ಕೆ 3 ಲಕ್ಷ 60 ಸಾವಿರ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಹಾಕ್ತೀವಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎಂದು ಘೋಷಿಸಿದರು.
ಅಸ್ಸೋಂನ ಗೊಲಘಾಟ್ನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸಲಿಲ್ಲ. ಸುಳ್ಳು ಹೇಳಿ ಜನರನ್ನು ನಂಬಿಸಿದರು. ಆದರೆ, ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಶೇ.20ರಷ್ಟು ಕಡಿಮೆ ಆದಾಯ ಇರುವ ಕುಟುಂಬಗಳಿಗೆ ನೀಡುತ್ತಿರುವ ಭರವಸೆ ಈಡೇರಿಸುತ್ತೇವೆ ಎಂದರು. ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲು ಬಿಡಲ್ಲ ಎಂದೂ ಹೇಳಿದರು.