ಹಂಗಾಮಿ ಅಧ್ಯಕ್ಷರಾಗಿ ವೋರಾ ಆಯ್ಕೆ?
ರಾಷ್ಟ್ರೀಯ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷರಾಗಿ ರಾಜ್ಯಸಭಾ ಸದಸ್ಯರಾಗಿರುವ ಮೋತಿಲಾಲ್ ವೊರಾ ಅವರನ್ನ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ. ವೋರಾ ಗಾಂಧಿ ಕುಟುಂಬದೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಆಗಿದ್ದಾರೆ.
ಇನ್ನು ಮತ್ತೊಂದು ಮಾಹಿತಿ ಪ್ರಕಾರ, ರಾಹುಲ್ ಗಾಂಧಿಯವರ ರಾಜೀನಾಮೆ ಸ್ವೀಕಾರ ಮಾಡಿ ಅಂಗೀಕರಿಸುವವರೆಗೆ ಅವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿದ್ದು, ವೋರಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವೋರಾ, ಅಧ್ಯಕ್ಷ ಸ್ಥಾನಕ್ಕೆ ನಾನು ಆಯ್ಕೆಗೊಂಡಿರುವ ಮಾಹಿತಿ ಗೊತ್ತಿಲ್ಲ ಎಂದು ಹೇಳಿದ್ದಾರೆ.