ಕರ್ನಾಟಕ

karnataka

By

Published : Sep 26, 2020, 7:13 PM IST

ETV Bharat / bharat

ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗೆ ಕಾಂಗ್ರೆಸ್‌ ಆಕ್ರೋಶ

ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಕಾರ್ಮಿಕ ಕಾಯ್ದೆಗೆ ತಿದ್ದುಪಡಿ, ಸಂಹಿತೆಗಳನ್ನು ಜಾರಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

congress-slams-labour-bills-terms-the-govt-an-enemy-of-workers
ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗೆ ಕಾಂಗ್ರೆಸ್‌ ಆಕ್ರೋಶ

ನವದೆಹಲಿ: ದೇಶದಲ್ಲಿ ವ್ಯಾಪಾರ‌ ವಾತಾವರಣ ನಿರ್ಮಾಣ ಮಾಡಲು ಪ್ರಧಾನಿ ಮೋದಿ ಸರ್ಕಾರ ತಮ್ಮ ಆಕ್ರಮಣಕಾರಿ ನಡೆಯಿಂದ ಕಾರ್ಮಿಕರ ಕಾನೂನುಗಳಿಗೆ ತಿದ್ದುಪಡಿ ತರಲು ಹೊರಟ್ಟಿದ್ದಾರೆ ಕಾಂಗ್ರೆಸ್‌ ಆರೋಪಿಸಿದೆ.

ಈ ಸಂಬಂಧ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರ ತನ್ನ ಅಜೆಂಡಾವನ್ನು ಕಾರ್ಮಿಕ ನೀತಿಗಳ ಬದಲಾವಣೆ ಮೇಲೆ ಹೇರುತ್ತಿದೆ. ಸಂಸತ್‌ನಲ್ಲಿ ವಿರೋಧ ಪಕ್ಷದ ಸದಸ್ಯರು ಇಲ್ಲದ ವೇಳೆ ಮಸೂದೆಗಳನ್ನು ಅಂಗೀಕರಿಸಿದ್ದಾರೆ. ಇವೆಲ್ಲ ನಕಲಿ ಹಕ್ಕುಗಳು ಎಂದು ಕಿಡಿಕಾರಿದ್ದಾರೆ.

ಕೈಗಾರಿಕೋದ್ಯಮಿಗಳನ್ನು ಒಲೈಸಲು ಈ ಮಸೂದೆಗಳನ್ನು ಜಾರಿಗೆ ತರುತ್ತಿದ್ದಾರೆ. ಸಲಹಾ ಸಮಿತಿ ಸಲಹೆಗಳನ್ನು ನೀಡಿದ್ದರೂ ಅದನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಸರ್ಕಾರ ಈ ಮಸೂದೆಗಳ ಸಂಬಂಧ ವೈಯಕ್ತಿಕ ಆಸಕ್ತಿಯನ್ನು ಹೊಂದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಔದ್ಯೋಗಿಕ ವಲಯದಲ್ಲಿ ಸುರಕ್ಷತೆ, ಆರೋಗ್ಯ ಮತ್ತು ಕೆಲಸ ಪರಿಸ್ಥಿತಿಗಳ ಸಂಹಿತೆ - 2020, ಕೈಗಾರಿಕಾ ಸಂಬಂಧಗಳ ಸಂಹಿತೆ -2020 ಹಾಗೂ ಸಾಮಾಜಿಕ ಭದ್ರತೆ ಸಂಹಿತೆ - 2020ಗಳಿಗೆ ಇತ್ತೀಚೆಗಷ್ಟೇ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದವು.

ಈ ಹೊಸ ತಿದ್ದುಪಡಿಯ ಸಂಹಿತೆಗಳನ್ನು ಜಾರಿ ಮಾಡುವ ಮುನ್ನ ಕೇಂದ್ರ ಸರ್ಕಾರ ಯಾವುದೇ ಕಾರ್ಮಿಕ ಸಂಘಟನೆಗಳು ಅಥವಾ ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎನ್ನಲಾಗಿದೆ.

ಭಾರತೀಯ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಒಂದೇ ಒಂದು ಸಭೆ ಸಹ ನಡೆಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಕಾರ್ಮಿಕರ ಶತ್ರು ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಕಾಂಗ್ರೆಸ್‌ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಜಿ.ಸಂಜೀವ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ಸಂಬಂಧಿತ ಮಸೂದೆಗಳ ಜಾರಿ ವೇಳೆ ರಾಜ್ಯಸಭೆಯಲ್ಲಿ ಮಾತನಾಡಿ ಕಾರ್ಮಿಕ ಸಚಿವ ಸಂತೋಷ್‌ ಗಂಗ್ವಾರ್‌, ಪಾರದರ್ಶಕ ವ್ಯವಸ್ಥೆಗಾಗಿ ಮಸೂದೆಗಳನ್ನು ಜಾರಿ ಮಾಡಲಾಗುತ್ತಿದೆ ಎಂದು ಹೇಳಿದ್ದರು.

ABOUT THE AUTHOR

...view details