ಕರ್ನಾಟಕ

karnataka

ETV Bharat / bharat

ಬಂಗಾಳದ ಚುನಾವಣೆಗೆ ಶುಕ್ರವಾರ ಸಿದ್ಧವಾಗಲಿದೆ ಕಾಂಗ್ರೆಸ್​ ಸೂತ್ರ - ಅಧೀರ್ ರಂಜನ್ ಚೌಧರಿ

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ತಯಾರಿ ಆರಂಭಿಸಲು ಶೀಘ್ರದಲ್ಲೇ ಮೈತ್ರಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಸಂಬಂಧ ಶುಕ್ರವಾರ ಪಕ್ಷದ ಮುಖಂಡರ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸಲಿದ್ದಾರೆ.

Rahul Gandhi
ರಾಹುಲ್ ಗಾಂಧಿ

By

Published : Nov 26, 2020, 5:49 PM IST

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪಕ್ಷದ ಅನುಸರಿಸಬೇಕಾದ ಸೂತ್ರಗಳು, ಮಾಡಿಕೊಳ್ಳಬೇಕಾದ ಸಿದ್ಧತೆಗಳ ಕುರಿತು ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ.

ಈ ಸಂಬಂಧ ಶುಕ್ರವಾರ ಪಕ್ಷದ ಮುಖಂಡರ ಜೊತೆ ವರ್ಚುವಲ್​ ಸಭೆ ನಡೆಸಲಿರುವ ರಾಹುಲ್​ ಗಾಂಧಿ, ಸಮಾನ ಮನಸ್ಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚಿಸಲಿದ್ದಾರೆ. ಸಭೆಯಲ್ಲಿ ಪಶ್ಚಿಮ ಬಂಗಾಳದ ಕಾಂಗ್ರೆಸ್​ ಉಸ್ತುವಾರಿ ಜಿತಿನ್ ಪ್ರಸಾದ್​​, ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧೀರ್ ರಂಜನ್ ಚೌಧರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಅಬ್ದುಲ್ ಮನ್ನನ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

294 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ಸರ್ಕಾರವನ್ನು ಉಳಿಸಿಕೊಂಡು ಅಧಿಕಾರ ಮುಂದುವರೆಸುವ ಸವಾಲು ಹಾಕಿದ್ದರೆ, ಇತ್ತ ಕಾಂಗ್ರೆಸ್ ಕೂಡ ತನ್ನ ಸ್ಥಾನವನ್ನು ಉಳಿಸಿಕೊಳ್ಳಬೇಕಾಗಿದೆ.

2016 ರಲ್ಲಿ ಕಾಂಗ್ರೆಸ್ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು 44 ಸ್ಥಾನಗಳನ್ನು ಗಳಿಸಿ ಬಹುಮತ ಪಡೆದ ಎರಡನೇ ಅತಿದೊಡ್ಡ ಪಕ್ಷವಾಯಿತು. ಆದರೆ, ಕಾಂಗ್ರೆಸ್​ನ ಅರ್ಧದಷ್ಟು ಶಾಸಕರು ಟಿಎಂಸಿಗೆ ಸೇರ್ಪಡೆಯಾಗಿದ್ದರು. ಇದೀಗ ಮತ್ತೆ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಾ ಅಥವಾ ಟಿಎಂಸಿ ಜೊತೆ ಸೇರಿ ಚುನಾವಣೆ ಎದುರಿಸುವುದಾ ಎನ್ನುವ ಸಂದಿಗ್ಧ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಅಲ್ಲದೇ ಈಗಾಗಲೇ ರಾಜ್ಯದ ಕೈ ನಾಯಕರು ಎಡಪಕ್ಷಗಳ ಮುಖಂಡರೊಂದಿಗೆ ಅನೌಪಚಾರಿಕವಾಗಿ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ನವೆಂಬರ್​ 23 ರಂದು ಕಾಂಗ್ರೆಸ್​ ಹಾಗೂ ಎಡಪಕ್ಷಗಳು ಸೇರಿ ಜಂಟಿಯಾಗಿ ಪ್ರಚಾರ ನಡೆಸಿದ್ದವು. ಇನ್ನು ಕಾಂಗ್ರೆಸ್​ನ ಇಬ್ಬರು ಹಿರಿಯ ನಾಯಕರಾದ ಅಧೀರ್ ರಂಜನ್ ಚೌಧರಿ ಮತ್ತು ದೀಪದಾಸ್ ಮುನ್ಶಿ ಟಿಎಂಸಿ ವಿರುದ್ಧ ಇದ್ದು, ಕೆಲ ಶಾಸಕರು ಟಿಎಂಸಿ ಜೊತೆ ಕೈಜೋಡಿಸಲು ಸಮ್ಮತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು 294 ವಿಧಾನಸಭಾ ಕ್ಷೇತ್ರಗಳ ಪೈಕಿ 90 ಕ್ಷೇತ್ರಗಳಲ್ಲಿ ಮುಸ್ಲಿಂ ಮತದಾರರಿದ್ದಾರೆ. ಇದು ಕಾಂಗ್ರೆಸ್​ಗೆ ವರದಾನ ಕೂಡ ಆಗಬಹುದು.

ಹೀಗಾಗಿ ಚುನಾವಣೆಗೆ ತಯಾರಿ ಆರಂಭಿಸಲು ಶೀಘ್ರದಲ್ಲೇ ಮೈತ್ರಿ ಅಂತಿಮಗೊಳಿಸಲು ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ.

ABOUT THE AUTHOR

...view details