ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಸೋಲಿಗೆ ಕಾರಣಗಳನ್ನ ಹುಡುಕುತ್ತಿದೆ.
ಚುನಾವಣೆಯಲ್ಲಿ ಕೇವಲ 52 ಕ್ಷೆತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಸತತ ಎರಡನೇ ಬಾರಿ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. ಸ್ವತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಮೇಠಿ ಕ್ಷೇತ್ರದಲ್ಲಿ ಸೋಲು ಅನುಭವಿಸಿರುವುದು ಕೈ ಪಾಳಯವನ್ನ ಮುಜುಗರಕ್ಕೀಡು ಮಾಡಿದೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಮೋದಿ ವಿರುದ್ಧ ಇಷ್ಟೊಂದು ಪ್ರಚಾರ ಮಾಡಿದ್ರೂ ಕಾಂಗ್ರೆಸ್ ಮಕಾಡೆ ಮಲಗಿದೆ. ಜನರನ್ನ ತಲುಪುವಲ್ಲಿ ಕೈ ಪಕ್ಷ ಎಡವಿದ್ದೆಲ್ಲಿ, ಎಂದು ಕೈ ನಾಯಕರು ಆತ್ಮಾವಲೋಕನ ನಡೆಸುತ್ತಿದ್ದು ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕೆ.ಸಿ. ವೇಣುಗೋಪಾಲ್, ಪಿ. ಚಿದಂಬರಂ ರಾಜ್ಯ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.