ಅಯೋಧ್ಯೆ: ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಇಂಜಿನಿಯರ್ಗಳು ಸ್ಥಳದಲ್ಲಿ ಮಣ್ಣನ್ನು ಪರೀಕ್ಷಿಸುತ್ತಿದ್ದಾರೆ. 30-40 ತಿಂಗಳಲ್ಲಿ ನಿರ್ಮಾಣ ಕಾರ್ಯ ಮುಗಿಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಟ್ವೀಟ್ ಮಾಡಿದೆ.
ಭೂಕಂಪ, ಬಿರುಗಾಳಿ ಸೇರಿದಂತೆ ನೈಸರ್ಗಿಕ ವಿಕೋಪಗಳಿಂದ ಯಾವುದೇ ಹಾನಿಯಾಗದಂತೆ ದೇಶದ ಪ್ರಾಚೀನ ಮತ್ತು ಸಾಂಪ್ರದಾಯಿಕ ನಿರ್ಮಾಣ ತಂತ್ರಗಳನ್ನು ಅನುಸರಿಸಿ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಮುಖ್ಯವಾಗಿ ಕಬ್ಬಿಣವನ್ನು ದೇವಾಲಯದ ನಿರ್ಮಾಣದಲ್ಲಿ ಬಳಸಲಾಗುವುದಿಲ್ಲ ಎಂದು ದೇಗುಲ ನಿರ್ಮಾಣದ ಹೊಣೆ ಹೊತ್ತಿರುವ ಟ್ರಸ್ಟ್ ತನ್ನ ಮೈಕ್ರೋ ಬ್ಲಾಗಿಂಗ್ ಸೈಟ್ನಲ್ಲಿ ಮಾಹಿತಿ ನೀಡಿದೆ.