ಕೋಲ್ಕತ್ತಾ:ದೇಶದಲ್ಲಿ ಕೊರೊನಾ ವಿರುದ್ಧದ ಹೋರಾಟ ಮುಂದುವರಿದಿದ್ದು, ಈಗಾಗಲೇ ಲಾಕ್ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇದರಿಂದ ವಲಸೆ ಕಾರ್ಮಿಕರ ಆಕ್ರೋಶದ ಕಟ್ಟೆಯೊಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಪೊಲೀಸರ ಮೇಲೆ ಕ್ವಾರಂಟೈನ್ ಸೆಂಟರ್ ವಿಚಾರವಾಗಿ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕಳೆದೆರೆಡು ದಿನಗಳ ಹಿಂದೆ ಚುರುಲಿ ಗ್ರಾಮದ ಪಕ್ಕದಲ್ಲಿರುವ ಹಾಸ್ಟೇಲ್ನಲ್ಲಿ ಕೊರೊನಾ ಶಂಕಿತ ವ್ಯಕ್ತಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಇದೇ ವಿಷಯವಾಗಿ ಪಕ್ಕದ ಗ್ರಾಮಸ್ಥರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.