ನವದೆಹಲಿ:ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಜನವರಿ 5 ರಂದು ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಉಪಕುಲಪತಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿ ಜೆಎನ್‌ಯು ವಿದ್ಯಾರ್ಥಿಗಳು ರಾಷ್ಟ್ರಪತಿ ಭವನದತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದಾರೆ.
ಮಾರ್ಗ ಮಧ್ಯೆಯೆ ಪ್ರತಿಭಟನಾಕಾರರನ್ನ ಪೊಲೀಸರು ತಡೆದಿದ್ದು, ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಬ್ಯಾರಿಕೇಡ್ಗಳನ್ನ ಹತ್ತಿ ಮುಂದೆ ಸಾಗಲು ಯತ್ನಿಸಿದ ವಿದ್ಯಾರ್ಥಿಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
ರಾಷ್ಟ್ರಪತಿ ಭವನದತ್ತ JNU ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ ಹಿರಿಯ ರಾಜಕೀಯ ಮುಖಂಡರಾದ ಸೀತಾರಾಮ್ ಯೆಚೂರಿ, ಡಿ ರಾಜಾ, ಪ್ರಕಾಶ್ ಕಾರಟ್, ಬೃಂದಾ ಕಾರಟ್ ಮತ್ತು ಶರದ್ ಯಾದವ್ ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಇಂದು ಮಧ್ಯಾಹ್ನ ಮಂಡಿ ಸದನದಿಂದ ಮೆರವಣಿಗೆಯನ್ನು ಪ್ರಾರಂಭಿಸಿದ್ದರು. ಮಾನವ ಸಂಪನ್ಮೂಲ ಸಚಿವಾಲಯದ ಕಚೇರಿಗಳಿಗೆ ತೆರಳಿ ಉಪಕುಲಪತಿ ರಾಜೀನಾಮೆ ಬೇಡಿಕೆ ಕುರಿತು ಮನವಿ ಸಲ್ಲಿಸುವ ಯೋಜನೆಯಾಗಿತ್ತು.
ಆದರೆ ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಗಳೊಂದಿಗಿನ ಸಭೆಯ ನಂತರ ರಾಷ್ಟ್ರಪತಿ ಭವನಕ್ಕೆ ತೆರಳಿ ಅವರನ್ನ ಭೇಟಿ ಮಾಡಲು ನಿರ್ಧರಿಸಿದರು. ಪ್ರತಿಭಟನಾ ಮೆರವಣಿಗೆ ಹಿನ್ನಲ್ಲೆಯಲ್ಲಿ ರಾಷ್ಟ್ರಪತಿ ಭವನದ ಸುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇನ್ನು ಪ್ರತಿಭಟನೆ ವೇಳೆ ಓರ್ವ ವಿದ್ಯಾರ್ಥಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.