ನವದೆಹಲಿ: ವಕೀಲರ ವಿರುದ್ಧ ಆಕ್ರೋಶ ಹೊರಹಾಕಿ ಪ್ರತಿಭಟನೆಗಿಳಿದಿದ್ದ ಪೊಲೀಸರು ಬರೋಬ್ಬರಿ 11 ಗಂಟೆಗಳ ಸತತ ಪ್ರತಿಭಟನೆಯನ್ನ ಹಿಂಪಡೆದಿದ್ದಾರೆ.
ಪೊಲೀಸರಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ಪರಿಹಾರ ನೀಡುವ ಭರವಸೆಯನ್ನು ಹಿರಿಯ ಅಧಿಕಾರಿಗಳು ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.
ದೆಹಲಿಯ ತೀಸ್ ಹಜಾರಿ ಕೋರ್ಟ್ ವಿಚಾರದಲ್ಲಿ ಪೊಲೀಸರು ನಡೆಸಿದ ಪ್ರತಿಭಟನೆ ಬಗ್ಗೆ ಕೇಂದ್ರ ಅಸಮಾಧಾನ ವ್ಯಕ್ತಪಡಿಸಿದೆ ಎನ್ನುವ ವಿಚಾರವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಕೀಲರೊಬ್ಬರು ದೆಹಲಿ ಪೊಲೀಸ್ ಕಮೀಷನರ್ಗೆ ನೋಟಿಸ್ ಜಾರಿ ಮಾಡಿದ್ದಾರೆ. ನ.5ರಂದು ದೆಹಲಿ ಪೊಲೀಸರು ಸಕ್ರಿಯವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ವೇಳೆ ಯಾವುದೇ ಕ್ರಮಕೈಗೊಳ್ಳದ ಕಾರಣಕ್ಕಾಗಿ ಸುಪ್ರೀಂ ಲಾಯರ್ ನೋಟಿಸ್ ಜಾರಿ ಮಾಡಿದ್ದಾರೆ.