ಕೋಲ್ಕತಾ: ಕೊರೊನಾ ಸಾಂಕ್ರಾಮಿಕ ರೋಗ ಮುಗಿದಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. ಭಾರತದ ಕೆಲವು ಭಾಗಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಸಮಯದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.
ಹೂಗ್ಲಿ ಜಿಲ್ಲೆಯ ಧನಿಯಖಾಲಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರ್ಯಾಲಿ ನಡೆಸುವ ಕಾರಣಕ್ಕೆ ದೀದಿ ಸರ್ಕಾರ ಲಾಕ್ಡೌನ್ ಹೇರಿದೆ. ಆದರೆ 'ಕೊರೊನಾ ಗಾನ್! ದೀದಿ' ಎಂದು ಘೋಷ್ ಹೇಳಿದ್ದಾರೆ. ಇವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಹರಿದಾಡುತ್ತಿದೆ.