ಕರ್ನಾಟಕ

karnataka

ETV Bharat / bharat

ದೇಶದಲ್ಲಿ 10 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತ ಗುಣಮುಖರ ಸಂಖ್ಯೆ! - ಕೊರೊನಾ ಸಾವಿನ ಪ್ರಮಾಣ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

corona
ಕೊರೊನಾ

By

Published : Jul 30, 2020, 10:16 AM IST

ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇವಲ 24 ಗಂಟೆಯಲ್ಲಿ 52,123 ಮಂದಿ ಸೋಂಕಿತರು ಪತ್ತೆಯಾಗಿದ್ದು, 775 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕೊರೊನಾ

ಇದರಿಂದಾಗಿ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15,83,792ಕ್ಕೆ ಏರಿಕೆಯಾಗಿದೆ. ಈವರೆಗೆ 34,968 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 5,28,242 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 10,20,582 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಒಟ್ಟು ಸೋಂಕಿತರಲ್ಲಿ ಶೇಕಡಾ 33.26ರಷ್ಟು ಮಂದಿ ಸೋಂಕಿತರಿಗೆ ಈಗ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು ಶೇಕಡಾ 64.51ರಷ್ಟು ಮಂದಿ ಗುಣಮುಖರಾಗಿದ್ದಾರೆ. ಕೇವಲ 2.23ರಷ್ಟು ಮಂದಿ ಮಾತ್ರ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

...view details