ನವದೆಹಲಿ:ದೇಶದಲ್ಲಿ ಕೊರೊನಾ ತೀವ್ರವಾಗಿ ವ್ಯಾಪಿಸುತ್ತಿದೆ. ಕೇವಲ 24 ಗಂಟೆಗಳಲ್ಲಿ 15, 968 ಸೋಂಕಿತರು ಪತ್ತೆಯಾಗಿದ್ದು, 465 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇದರಿಂದಾಗಿ ರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4,56,183ಕ್ಕೆ ಏರಿಕೆಯಾಗಿದೆ. ಈ ಸೋಂಕಿತರಲ್ಲಿ 2,58,685 ಮಂದಿ ಸೋಂಕಿತರು ಗುಣಮುಖರಾಗಿದ್ದು, 1,83,022 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಈವರೆಗೆ 14,476 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.
24 ಗಂಟೆಯಲ್ಲಿ 2 ಲಕ್ಷಕ್ಕೂ ಅಧಿಕ ಸೋಂಕು ಪರೀಕ್ಷೆ:
ಇದುವರೆಗೆ ದೇಶದಲ್ಲಿ 73,52,911 ಮಂದಿಗೆ ಕೊರೊನಾ ಸೋಂಕಿನ ಪರೀಕ್ಷೆ ಮಾಡಲಾಗಿದೆ. 24 ಗಂಟೆಯಲ್ಲಿ 2,15,195 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸ್ಪಷ್ಟನೆ ನೀಡಿದೆ.