ನವದೆಹಲಿ: ದೇಶದಲ್ಲಿ 24 ಗಂಟೆಯಲ್ಲಿ 52,509 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 19 ಲಕ್ಷದ ಗಡಿ ದಾಟಿದ್ದು, ಒಂದೇ ದಿನದಲ್ಲಿ 857 ಮಂದಿ ಸಾವನ್ನಪ್ಪಿದ್ದಾರೆ.
ದೇಶದಲ್ಲಿ 19 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ: 2 ಕೋಟಿ ಮಂದಿಗೆ ಪರೀಕ್ಷೆ - ಕೊರೊನಾ ಸಾವು
ದೇಶದಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19 ಲಕ್ಷ ದಾಟಿದೆ.
ಕೊರೊನಾ
ಈಗ ಒಟ್ಟು 5,86,244 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 12,82,216 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ ದೇಶದಲ್ಲಿ ಸೋಂಕಿಗೆ 39,795 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 4ರಂದು 6,19, 652 ಮಂದಿಗೆ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈವರೆಗೆ 2,14,84,402(2.14ಕೋಟಿ) ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.