ಕರ್ನಾಟಕ

karnataka

ETV Bharat / bharat

ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾ ಫಸ್ಟ್​​​​... ಭಾರತದ ಸ್ಥಾನ ಏನು ಗೊತ್ತಾ? - ವಿಶ್ವದಲ್ಲಿ ಸೋಂಕಿತರು

ಕೊರೊನಾ ಸೋಂಕಿತರ ಸಂಖ್ಯೆ ವಿಶ್ವದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಮೆರಿಕಾ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೇ ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ.

corona latest updates
ಕೊರೊನಾ ಲೇಟೆಸ್ಟ್​ ಅಪ್ಡೇಟ್ಸ್​

By

Published : Jun 1, 2020, 8:13 AM IST

ನವದೆಹಲಿ: ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 62,62,422ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿಗೆ 3,73,848ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. 28,46,477ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಅಮೆರಿಕದಲ್ಲಿ 18,37,1070 ಮಂದಿ ಸೋಂಕಿತರಿದ್ದು, ಇವರಲ್ಲಿ 5,99,867 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 1,06,195 ಮಂದಿ ಇದುವರೆಗೆ ಕೊರೊನಾಗೆ ಬಲಿಯಾಗಿದ್ದಾರೆ.

ನಂತರದ ಸ್ಥಾನದಲ್ಲಿ ಬ್ರೆಜಿಲ್​ ಇದ್ದು ಕಳೆದ 24 ಗಂಟೆಗಳಲ್ಲಿ, ಬ್ರೆಜಿಲ್​ನಲ್ಲಿ 16,409 ಹೊಸ ಪ್ರಕರಣಗಳನ್ನು ದಾಖಲಿಸಿದ್ದು, ದೇಶದ ಒಟ್ಟು ಸೋಂಕಿತರ ಸಂಖ್ಯೆ 5,14,849ಕ್ಕೆ ಏರಿಕೆಯಾಗಿದೆ. ಲ್ಯಾಟಿನ್​ ಅಮೆರಿಕ ಕೊರೊನಾ ವೈರಸ್​ನಿಂದ ಅತಿ ಹೆಚ್ಚು ಹಾನಿಗೊಳಗಾದ ದೇಶ.

ನಂತರದ ಸ್ಥಾನದಲ್ಲಿ ರಷ್ಯಾ ಇದ್ದು ಒಟ್ಟು 4,05,843 ಮಂದಿ ಸೋಂಕಿತರಲ್ಲಿ 4, 693 ಮಂದಿ ಮೃತಪಟ್ಟಿದ್ದಾರೆ. 1,71,883 ಮಂದಿ ಚೇತರಿಕೆ ಕಂಡಿದ್ದಾರೆ. ಇದಾದ ನಂತರ ಸ್ಪೇನ್​, ಇಂಗ್ಲೆಂಡ್​, ಇಟಲಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಾಗಿದ್ದು ಭಾರತ ಏಳನೇ ಸ್ಥಾನದಲ್ಲಿದೆ. ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,82,143 ಇದ್ದು, 89,995 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. 86,983 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 5,164 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ABOUT THE AUTHOR

...view details