ಛತ್ತೀಸ್ಗಢ:ಕಳ್ಳತನ ಆರೋಪದಡಿ ಬಂಧಿತರಾಗಿದ್ದ ಆರೋಪಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದೀಗ ಈತನ ಸಂಪರ್ಕಕ್ಕೆ ಬಂದ 59 ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.
ಅರೆಸ್ಟ್ ಆಗಿದ್ದ ಇಬ್ಬರು ಆರೋಪಿಗಳಿಗೆ ಕೊರೊನಾ ಸೋಂಕು... 59 ಪೊಲೀಸರಿಗೆ ಕ್ವಾರಂಟೈನ್ - ಆರೋಪಿಗಳಿಗೆ ಕೊರೊನಾ ಸೋಂಕು ಲೇಟೆಸ್ಟ್ ಸುದ್ದಿ
ಕಳ್ಳತನ ಆರೋಪದಡಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಕೊರೊನಾ ದೃಢಪಟ್ಟಿದೆ. ಅವರ ಸಂಪರ್ಕಕ್ಕೆ ಬಂದ 59 ಮಂದಿ ಪೊಲೀಸ್ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಿದ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.
ಮೂಲಗಳ ಪ್ರಕಾರ, ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಕೊಟ್ವಾಲಿ ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಬಂಧಿಸಿತ್ತು. ಈ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನಂತರ ಅವರನ್ನು ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರೂ ಆರೋಪಿಗಳು ಆಸ್ಪತ್ರೆಯಲ್ಲಿ ವಾರ್ಡ್‌ನ ಕಿಟಕಿ ಒಡೆದು ಪರಾರಿಯಾಗಿದ್ದಾರೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳನ್ನು ಹುಡುಕಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ಆ್ಯಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಈ ಸೋಂಕಿತ ಆರೋಪಿಗಳ ಸಂಪರ್ಕಕ್ಕೆ ಬಂದ ಹಿನ್ನೆಲೆ 59 ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.