ನವದೆಹಲಿ:ಮಹಮಾರಿ ಕೊರೊನಾ ಸೋಂಕಿನಿಂದಾಗಿ ಲೋಕ ನಾಯಕ್ ಜಯಪ್ರಕಾಶ್ ಆಸ್ಪತ್ರೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಅವರಲ್ಲಿ ಇದೀಗ ಡೆಂಘೀ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಸಾಂಕೇತ್ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ಅವರನ್ನ ದಾಖಲು ಮಾಡಲಾಗಿದೆ.
ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾಗೆ ಕೊರೊನಾ ಜತೆ ಡೆಂಘೀ ಜ್ವರ - ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಮನೀಷ್ ಸಿಸೋಡಿಯಾ
ಡಿಸಿಎಂ ಮನೀಷ್ ಸಿಸೋಡಿಯಾ ಅವರಲ್ಲಿ ಜ್ವರ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರನ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
delhi Deputy CM Manish Sisodia
ಸೆಪ್ಟೆಂಬರ್ 14ರಂದು ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಕಾರಣ ಹೋಂ ಕ್ವಾರಂಟೈನ್ಗೊಳಗಾಗಿದ್ದರು. ನಿನ್ನೆ ಜ್ವರ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿರುವ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
48 ವರ್ಷದ ಸಿಸೋಡಿಯಾ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ಅವರಿಗೆ ನಡೆಸಿರುವ ಪರೀಕ್ಷೆಯಲ್ಲಿ ಡೆಂಘೀ ಜ್ವರ ದೃಢಪಟ್ಟಿದ್ದು, ಬಿಳಿ ರಕ್ತ ಕಣಗಳಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡು ಬಂದಿದೆ ಎಂದು ತಿಳಿದು ಬಂದಿದೆ.
Last Updated : Sep 24, 2020, 9:49 PM IST