ನವದೆಹಲಿ:ಮಹಾಮಾರಿ ಕೋವಿಡ್ ಇದೀಗ ಮತ್ತಷ್ಟು ವೇಗ ಪಡೆದುಕೊಂಡಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 2,958 ಪ್ರಕರಣ ಕಾಣಿಸಿಕೊಂಡಿದ್ದು, 126 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ದೇಶದಲ್ಲಿ ಒಟ್ಟು ಕೋವಿಡ್ ಸಂಖ್ಯೆ 49,391 ಆಗಿದೆ.
ಭಾರತದಲ್ಲಿ ಅರ್ಧ ಲಕ್ಷದ ಸಮೀಪ ಕೋವಿಡ್ ... 24 ಗಂಟೆಯಲ್ಲೇ 2,958 ಪ್ರಕರಣ ದಾಖಲು! - ದೇಶದಲ್ಲಿ ಕೊರೊನಾ ಕೇಸ್
ಮಹಾಮಾರಿ ಕೊರೊನಾ ವಿರುದ್ಧದ ಹೋರಾಟ ಮುಂದುವರಿದಿದ್ದು, ಈ ಮಧ್ಯೆ ಕೂಡ ದೇಶದಲ್ಲಿ ಅತಿ ಹೆಚ್ಚು ಪ್ರಕರಣ ಕಾಣಿಸಿಕೊಳ್ಳುತ್ತಿರುವುದು ಎಲ್ಲರಲ್ಲೂ ಆತಂಕ ಮೂಡಿಸಿದೆ.
ಮಹಾರಾಷ್ಟ್ರದಲ್ಲೇ ನಿನ್ನೆ 984 ಹೊಸ ಪ್ರಕರಣ ಕಾಣಿಸಿಕೊಂಡಿರುವುದರಿಂದ ಒಟ್ಟು ಸೋಂಕಿತರ ಸಂಖ್ಯೆ 15,525ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲೂ 508 ಹೊಸ ಪ್ರಕರಣ ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 4 ಸಾವಿರ ಆಗಿದೆ. ಗುಜರಾತ್ನಲ್ಲಿ ಕಳೆದ 24 ಗಂಟೆಯಲ್ಲಿ 441 ಕೇಸ್ನಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 6,245 ಆಗಿದ್ದು, ದೆಹಲಿಯಲ್ಲೂ 206 ಹೊಸ ಪ್ರಕರಣ ಕಾಣಿಸಿಕೊಂಡಿದ್ದು ಒಟ್ಟು ಸೋಂಕಿತರ ಸಂಖ್ಯೆ 5,104 ಆಗಿದೆ.
ದೇಶದಲ್ಲಿ ಇಲ್ಲಿಯವರೆಗೆ 49,391 ಪ್ರಕರಣಗಳಿದ್ದು, ಇದರಲ್ಲಿ 33,514 ಆ್ಯಕ್ಟೀವ್ ಕೇಸ್ಗಳಿವೆ. ಉಳಿದಂತೆ 14,183 ಜನರು ಸೋಂಕಿನಿಂದ ಗುಣಮುಖರಾಗಿದ್ದು, 1,694 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದೀಗ ದೇಶದಲ್ಲಿ ಮೇ.17ರವರೆಗೆ ಲಾಕ್ಡೌನ್ ಮುಂದೂಡಿಕೆ ಮಾಡಲಾಗಿದ್ದು, ಇದರ ಮಧ್ಯೆ ಕೂಡ ಅತಿ ಹೆಚ್ಚು ಕೋವಿಡ್ ಪ್ರಕರಣ ಕಾಣಿಸಿಕೊಳ್ಳುತ್ತಿರುವುದು ದೇಶದ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ 1456 ಸೋಂಕಿತರು ಕೋವಿಡ್ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆಗೆ ಸೇರಿಕೊಂಡಿದ್ದಾರೆ.