ನವದೆಹಲಿ:ದೇಶದಲ್ಲಿ ಮತ್ತೆ 19 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನಿನ್ನೆಯಿಂದ ಇಲ್ಲಿಯವರೆಗೂ 19 ನೂತನ ಪ್ರಕರಣಗಳು ಪತ್ತೆಯಾಗಿವೆ. 415 ರಲ್ಲಿ 349 ಭಾರತೀಯರು ಮತ್ತು 41 ವಿದೇಶಿಗರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಮಾರಕ ಸೋಂಕಿಗೆ 7 ಮಂದಿ ಬಲಿಯಾಗಿದ್ದರೆ, 24 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.