ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ಗೆ ಎರಡನೇ ಬಲಿಯಾಗಿದೆ. ದೆಹಲಿ ಆರ್ಎಂಎಲ್ ಆಸ್ಪತ್ರೆಯಲ್ಲಿ 69 ವರ್ಷದ ವೃದ್ಧೆಯೊಬ್ಬರು ಕೊರೊನಾ ವೈರಸ್ನಿಂದ ಸಾವನ್ನಪ್ಪಿದ್ದಾರೆ. ಈ ವಿಚಾರವನ್ನು ಆಸ್ಪತ್ರೆಯ ಆರೋಗ್ಯಾಧಿಕಾರಿಗಳು ದೃಢಪಡಿಸಿದ್ದಾರೆ.
ಪಶ್ಚಿಮ ದೆಹಲಿಯ ಜನಕ್ಪುರಿ ನಿವಾಸಿ 69 ವರ್ಷದ ವೃದ್ಧೆ ಕೊರೊನಾ ವೈರಸ್ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.
ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ವೃದ್ಧೆ ಬಳಲುತ್ತಿದ್ದರು ಎಂಬ ಮಾಹಿತಿ ದೊರೆತಿದೆ. ಸಂತ್ರಸ್ಥೆಯ ಮಕ್ಕಳಲ್ಲೊಬ್ಬರು ವಿದೇಶದಲ್ಲಿದ್ದು, ಇತ್ತೀಚೆಗೆ ದೆಹಲಿಗೆ ಬಂದಿದ್ದರು. ಈ ವೇಳೆ ಅವರಲ್ಲಿದ್ದ ಕೊರೊನಾ ಸೋಂಕು ತಾಯಿಗೂ ಹರಡಿದೆ ಎನ್ನಲಾಗುತ್ತಿದೆ.