ಕರ್ನಾಟಕ

karnataka

ETV Bharat / bharat

ಕೊರೊನಾ ಭೀತಿ: ಮಾರ್ಚ್ 31 ರವರೆಗೆ ದೆಹಲಿಯ ಶಾಲೆಗಳು ಬಂದ್​

ಭಾರತದಲ್ಲಿ ಕೊರೊನಾ ವೈರಸ್​ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಾರ್ಚ್ 31ರ ವರೆಗೆ ದೆಹಲಿಯ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವಿಟರ್​ನಲ್ಲಿ ತಿಳಿಸಿದ್ದಾರೆ.

schools to remain shut in New Delhi
ದೆಹಲಿಯ ಶಾಲೆಗಳು ಬಂದ್​

By

Published : Mar 5, 2020, 5:28 PM IST

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್​ ಸೋಂಕಿತರ ಸಂಖ್ಯೆ 30ಕ್ಕೆ ಏರುತ್ತಿದ್ದಂತೆಯೇ ಮುಂಜಾಗೃತ ಕ್ರಮವಾಗಿ ಮಾರ್ಚ್ 31ರ ವರೆಗೆ ದೆಹಲಿಯ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ದೆಹಲಿ ಸರ್ಕಾರ ರಜೆ ಘೋಷಣೆ ಮಾಡಿದೆ.

ಮಾ.31ರ ವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ತಕ್ಷಣವೇ ಮುಚ್ಚಲಾಗುವುದು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವಿಟರ್​ನಲ್ಲಿ ತಿಳಿಸಿದ್ದಾರೆ.

ಅಲ್ಲದೇ ವೈರಸ್​ ಹರಡುವುದನ್ನು ತಡೆಯಲು ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಸಹ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ವ್ಯಕ್ತಿಯೋರ್ವನಿಗೆ ಕೊರೊನಾ ವೈರಸ್​ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಭಾರತದಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾದಂತಾಗಿದೆ. ಆತನು ಕೊರೊನಾಗೆ 77 ಮಂದಿ ಬಲಿಯಾದ ಇರಾನ್​ ದೇಶಕ್ಕೆ ಭೇಟಿ ನೀಡಿ ಬಂದಿರುವುದಾಗಿ ತಿಳಿದು ಬಂದಿದೆ.

ABOUT THE AUTHOR

...view details