ವುಹಾನ್(ಚೀನಾ): ಸಾವಿರಾರು ಜನರನ್ನು ಬಲಿ ಪಡೆದಿರುವ ಕೊರೊನಾ ವೈರಸ್ ಸೋಂಕು ಕಮ್ಯುನಿಸ್ಟ್ ಚೀನಾದ ಅತಿದೊಡ್ಡ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.
ಕೊರೊನಾ ವೈರಸ್ ಕಮ್ಯುನಿಸ್ಟ್ ಚೀನಾದ ಅತಿದೊಡ್ಡ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ: ಅಧ್ಯಕ್ಷ ಕ್ಸಿ ಜಿನ್‌ಪಿಂಗ್ - Chinese President Xi Jinping
ಸಾವಿರಾರು ಜನರನ್ನು ಬಲಿ ಪಡೆದಿರುವ ಕೊರೊನಾ ವೈರಸ್ ಸೋಂಕು ಕಮ್ಯುನಿಸ್ಟ್ ಚೀನಾದ ಅತಿದೊಡ್ಡ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹೇಳಿದ್ದಾರೆ.
ಅಧ್ಯಕ್ಷ ಕ್ಸಿ ಜಿನ್‌ಪಿಂಗ್
ಈ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುವ ಸೋಂಕನ್ನು ಹೊಂದಿದೆ ಮತ್ತು ನಿಯಂತ್ರಿಸಲು ಅತ್ಯಂತ ಕಷ್ಟಕರವಾಗಿದೆ ಎಂದು ಕ್ಸಿ ಜಿನ್‌ಪಿಂಗ್ ಹೇಳಿದ್ದಾರೆ. ಹಾಗೆಯೇ ಇದು ನಮಗೆ ಬಿಕ್ಕಟ್ಟು ಮತ್ತು ದೊಡ್ಡ ಪರೀಕ್ಷೆ ಎಂದು ಅವರು ಹೇಳಿದ್ದಾರೆ.
ಚೀನಾದ ಮುಖ್ಯ ಭೂಭಾಗದಲ್ಲಿ ವೈರಸ್ ಸೋಂಕಿನ ಸಂಖ್ಯೆ ಸುಮಾರು 77,000 ರಷ್ಟಿದೆ. ಹಾಗಾಗಿ ದಕ್ಷಿಣ ಕೊರಿಯಾದಂತಹ ದೇಶಗಳು ಹೆಚ್ಚಿನ ಎಚ್ಚರಿಕೆ ವಹಿಸಿವೆ ಮತ್ತು ಇಟಲಿಯು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕ್ಸಿ-ಜಿನ್‌ಪಿಂಗ್ ತಿಳಿಸಿದ್ದಾರೆ.