ಕರ್ನಾಟಕ

karnataka

ETV Bharat / bharat

ಕರ್ನಾಟಕ ಪೊಲೀಸರ ಕ್ರಮ ಖಂಡಿಸಿ ಪ್ರಧಾನಿಗೆ ಪತ್ರ ಬರೆದ ಕೇರಳ ಸಿಎಂ - ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿರುವ ವಿಚಾರ

ಕರ್ನಾಟಕ ಮತ್ತು ಕೇರಳ ನಡುವಿನ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿರುವ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಕೇರಳ ಸಿಎಂ ಪತ್ರ ಬರೆದಿದ್ದಾರೆ.

Kerala CM Pinarayi Vijayan writes to PM Modi
ಪ್ರಧಾನಿಗೆ ಪತ್ರ ಬರೆದ ಕೇರಳ ಸಿಎಂ

By

Published : Mar 28, 2020, 3:03 PM IST

ತಿರುವನಂತಪುರಂ:ತಲಸ್ಸೇರಿ-ಕೂರ್ಗ್ ರಾಜ್ಯ ಹೆದ್ದಾರಿ- 30 ಅನ್ನು ಬಂದ್ ಮಾಡಿರುವ ಕರ್ನಾಟಕ ಪೊಲೀಸರ ಕ್ರಮದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಬೇಕೆಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದಿದ್ದಾರೆ.

ಪ್ರಧಾನಿಗೆ ಪತ್ರ ಬರೆದ ಕೇರಳ ಸಿಎಂ

ಕೊರೊನಾ ಸೋಂಕು ಹರಡುವುದನ್ನು ತಡೆಯುವ ಕ್ರಮವಾಗಿ ಈ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಆದರೆ ಈ ರಸ್ತೆ ಕೇರಳ ರಾಜ್ಯಕ್ಕೆ ಬೇಕಾಗುವ ಅಗತ್ಯ ಸರಕುಗಳನ್ನು ಸಾಗಿಸುವ ಜೀವನಾಡಿಯಾಗಿದೆ. ಈ ರಸ್ತೆ ಕೇರಳವನ್ನು ವೀರಜಪೆಟ್ಟ ಮೂಲಕ ಕರ್ನಾಟಕದ ಕೂರ್ಗ್‌ನೊಂದಿಗೆ ಸಂಪರ್ಕಿಸುತ್ತದೆ ಎಂದಿದ್ದಾರೆ.

ಈ ರಸ್ತೆ ಹೊರತುಪಡಿಸಿದರೆ ರಾಜ್ಯಕ್ಕೆ ಅಗತ್ಯ ವಸ್ತುಗಳನ್ನು ಸಾಗಿಸಲು ತುಂಬಾ ದೀರ್ಘವಾದ ರಸ್ತೆಯನ್ನು ಬಳಸಬೇಕಾಗಿದೆ. ಹೀಗಾಗಿ ಈ ವಿಷಯದಲ್ಲಿ ತುರ್ತಾಗಿ ಮಧ್ಯ ಪ್ರವೇಶಿಸಬೇಕು. ಅಗತ್ಯ ಸರಕುಗಳು ಶೀಘ್ರವಾಗಿ ರಾಜ್ಯವನ್ನು ತಲುಪುತ್ತವೆಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

ABOUT THE AUTHOR

...view details