ನವದೆಹಲಿ:ಕೊರೊನಾ ವೈರಸ್ ವಿರುದ್ಧ ಯುದ್ಧದಲ್ಲಿ ಮುಂಚೂಣಿಯಲ್ಲಿ ಹೋರಾಡುತ್ತಿರುವ ಲಕ್ಷಾಂತರ ವೈದ್ಯರು, ದಾದಿಯರು ಮತ್ತು ಇತರ ಅರೆವೈದ್ಯಕೀಯ ಸಿಬ್ಬಂದಿಯ ರಕ್ಷಣೆಗೆ ಕೇಂದ್ರ ಮುಂದಾಗಿದೆ. ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವ ಅಪರಾಧಿಗಳಿಗೆ ದಂಡ ವಿಧಿಸಲು ಮತ್ತು ಅವರಿಂದ ಉಂಟಾದ ಹಾನಿಗಳನ್ನು ಮರುಪಡೆಯಲು ಸುಗ್ರೀವಾಜ್ಞೆ ತರಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 1897ರ ಸಾಂಕ್ರಾಮಿಕ ರೋಗ ಕಾಯ್ದೆಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ಈ ಸುಗ್ರೀವಾಜ್ಞೆ ಪ್ರಕಾರ ವೈದ್ಯರು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರ ಮೇಳೆ ದಾಳಿ ಅಥವಾ ಕಿರುಕುಳ ನೀಡಿದರೆ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗುತ್ತದೆ. ಮತ್ತು ಕಠಿಣ ಕಾರಾಗೃಹ ಶೀಕ್ಷೆ ಹಾಗೂ ನಷ್ಟದ ಹಾನಿ ಮರುಪಡೆಯಲು ಅವಕಾಶ ನೀಡಲಾಗಿದೆ.