ಕರ್ನಾಟಕ

karnataka

ETV Bharat / bharat

ಕೊರೊನಾ ಭೀತಿ: ಶುಕ್ರವಾರದಿಂದ ರಾಷ್ಟ್ರಪತಿ ಭವನವೂ ಬಂದ್ - ಶುಕ್ರವಾರದಿಂದ ರಾಷ್ಟ್ರಪತಿ ಭವನವೂ ಬಂದ್

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ರಾಷ್ಟ್ರಪತಿ ಭವನವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಚ್ಚಲಾಗಿದೆ.

Rashtrapati Bhavan closed for visitors,ಶುಕ್ರವಾರದಿಂದ ರಾಷ್ಟ್ರಪತಿ ಭವನವೂ ಬಂದ್
ಶುಕ್ರವಾರದಿಂದ ರಾಷ್ಟ್ರಪತಿ ಭವನವೂ ಬಂದ್

By

Published : Mar 12, 2020, 9:59 PM IST

ನವದೆಹಲಿ: ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರಪತಿ ಭವನ ಪ್ರವೇಶಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ, ಶುಕ್ರವಾರದಿಂದ ಮುಂದಿನ ಸೂಚನೆ ಬರುವವರೆಗೆ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ರಾಷ್ಟ್ರಪತಿ ಅವರ ಅಧಿಕೃತ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಲಾಗಿದೆ.

ಕೊರೊನಾ ಭೀತಿಯಿಂದ ರಾಷ್ಟ್ರಪತಿ ಭವನದಲ್ಲಿರುವ ಮೊಘಲ್ ಗಾರ್ಡನ್​ ಪ್ರವೇಶವನ್ನು ಸಾರ್ವಜನಿಕರಿಗೆ ಮುಚ್ಚಿದ ಒಂದು ವಾರದ ನಂತರ ಈ ಪ್ರಕಟಣೆ ಬಂದಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇಲ್ಲಿಯವೆರೆಗೆ ಆರು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ದೆಹಲಿಯ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಸಿನಿಮಾ ಹಾಲ್‌ಗಳನ್ನು ಮಾರ್ಚ್ 31 ರವರೆಗೆ ಬಂದ್ ಮಾಡುವಂತೆ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.

ABOUT THE AUTHOR

...view details