ಡೆಹರಾಡೂನ್ (ಉತ್ತರಾಖಂಡ್):ಕೊರೊನಾ ವೈರಸ್ ನಿಯಂತ್ರಿಸುವ ಸಲುವಾಗಿ ದೇಶದ ವಿವಿಧ ಭಾಗಗಳ 75 ನಗರಗಳಿಂದ ಬರುವವರಿಗೆ ಕ್ವಾರಂಟೈನ್ ಅವಧಿಯನ್ನು 21 ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ಉತ್ತರಾಖಂಡ್ ಸರ್ಕಾರ ತಿಳಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತಪಾಲ್ ಕುಮಾರ್ ಸಿಂಗ್ ಈ ಆದೇಶ ಹೊರಡಿಸಿದ್ದು, ಈ ಹಿಂದೆ ಅನ್ಯರಾಜ್ಯದಿಂದ ಬಂದವರಿಗೆ ಒಂದು ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತಿತ್ತು. ಆದರೆ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕಾಲಾವಧಿಯನ್ನು 21 ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.