ಜೈಪುರ (ರಾಜಸ್ಥಾನ):ಪತಂಜಲಿ ಆಯುರ್ವೇದ ಔಷಧ ಕೊರೊನಿಲ್ ಅನ್ನು ಕೊರೊನಾ ಸೋಂಕಿನ ಪರಿಹಾರವಾಗಿ ಪ್ರಚಾರ ಮಾಡುತ್ತಿರುವ ಬಾಬಾ ರಾಮದೇವ್ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಬಾಬಾ ರಾಮ್‌ದೇವ್ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲು
ಜೈಪುರದ ಜ್ಯೋತಿ ನಗರ ಪೊಲೀಸ್ ಠಾಣೆಯಲ್ಲಿ ಬಾಬಾ ರಾಮ್‌ದೇವ್, ಆಚಾರ್ಯ ಬಾಲಕೃಷ್ಣ, ವಿಜ್ಞಾನಿ ಅನುರಾಗ್ ವರ್ಷನಿ, ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಬಲ್ಬೀರ್ ಸಿಂಗ್ ತೋಮರ್ ಮತ್ತು ನಿರ್ದೇಶಕ ಅನುರಾಗ್ ತೋಮರ್ ವಿರುದ್ಧ ಪ್ರಕರಣ ದಾಖಲಾಗಿದೆ.
ramdev
ಜೈಪುರದ ಜ್ಯೋತಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 420 (ವಂಚನೆ) ಸೇರಿದಂತೆ ವಿವಿಧ ಕಲಂಗಳ ಅಡಿ ಬಾಬಾ ರಾಮ್‌ದೇವ್, ಬಾಲಕೃಷ್ಣ, ವಿಜ್ಞಾನಿ ಅನುರಾಗ್ ವರ್ಷನಿ, ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ನಿಮ್ಸ್) ಅಧ್ಯಕ್ಷ ಬಲ್ಬೀರ್ ಸಿಂಗ್ ತೋಮರ್ ಮತ್ತು ನಿರ್ದೇಶಕ ಅನುರಾಗ್ ತೋಮರ್ ಮೇಲೆ ಕೇಸು ದಾಖಲಿಸಲಾಗಿದೆ.
ಇದರ ಜೊತೆಗೆ ರಾಜಸ್ಥಾನದ ಆರೋಗ್ಯ ಇಲಾಖೆಯು ಜೈಪುರದ ನಿಮ್ಸ್ ಆಸ್ಪತ್ರೆಗೆ ನೋಟಿಸ್ ನೀಡಿದ್ದು, ಕೊರೊನಾ ವೈರಸ್ ರೋಗಿಗಳ ಮೇಲೆ ನಡೆಸಿದ ಪ್ರಯೋಗಗಳ ಬಗ್ಗೆ ವಿವರಣೆ ಕೇಳಿದೆ.