ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ ಭಾನುವಾರ ಬಾಂಬ್ ಸ್ಫೋಟಗೊಂಡಿದೆ.
ಕಾನ್ಪುರದಲ್ಲಿ ಬಾಂಬ್ ಸ್ಫೋಟ: ಸ್ಥಳೀಯರಲ್ಲಿ ಆತಂಕ
ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಭಾನುವಾರ ಸ್ಥಳೀಯ ನಿರ್ಮಿತ ಬಾಂಬ್ ಸ್ಫೋಟಗೊಂಡಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ.
ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಾಂಬ್ ಸ್ಫೋಟ
ಬಾಬು ಪೂರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗಾಹಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶ್ವಾನ ದಳ, ಎಫ್ಎಸ್ಎಲ್ ತಂಡ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈವರೆಗೆ ಯಾವುದೇ ಸಾವು-ನೋವು ವರದಿಯಾಗಿಲ್ಲ.
ಇನ್ನು ಘಟನೆಯ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.