ನವದೆಹಲಿ:ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಇಂದು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಕೋವಿಡ್-19 ನಿರ್ವಹಣೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದಿದ್ದಾರೆ.
ಪಿಪಿಇ ಕಿಟ್, ಎನ್95 ಮಾಸ್ಕ್ಗಳು, ವೆಂಟಿವೇಟರ್ಸ್‌ಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು. ಯಾವುದೇ ತುರ್ತು ಪರಿಸ್ಥಿತಿ ಬಂದರೂ ವೈದ್ಯಕೀಯ ಸಲಕರಣಿಗಳಲ್ಲಿ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದಾರೆ.