ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಎಲ್ಲವೂ ಸುಗಮವಾಗಿ ನಡೆಯುತ್ತಿದೆಯೇ ಎಂದು ಪರಿಶೀಲನೆ ನಡೆಸಲು ಬಂದಿದ್ದೇನೆ. ಪರಿಸ್ಥಿತಿಯನ್ನು ವೈಜ್ಞಾನಿಕ ಮತ್ತು ವೃತ್ತಿಪರ ರೀತಿಯಲ್ಲಿ ನಿರ್ವಹಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.